ನವದೆಹಲಿ: ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ ನೀಡಲು ಬಂದ ಗೌರವ ಡಾಕ್ಟರೇಟ್ ಪದವಿಯನ್ನು ಪ್ರಧಾನಿ ನರೇಂದ್ರ ಮೋದಿ ವಿನಮ್ರವಾಗಿ ತಿರಸ್ಕರಿಸಿದ್ದಾರೆ. ಇಂತಹ ಪದವಿಗಳನ್ನು ಸ್ವೀಕರಿಸುವುದು ತನ್ನ ಆದರ್ಶಕ್ಕೆ ವಿರುದ್ಧವಾದುದು ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.
ಫೆ.22ರಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇದೇ ವೇಳೆ ಅವರಿಗೆ ಗೌರವ ಡಾಕ್ಟರೇಟ್ ನೀಡಲು ವಿಶ್ವವಿದ್ಯಾನಿಲಯ ಮುಂದಾಗಿತ್ತು. ಸುಧಾರಕರಾಗಿ, ಸಾರ್ವಜನಿಕ ಸೇವೆ ಮತ್ತು ಆಡಳಿತದಲ್ಲಿ ಅದ್ಭುತ ನಾಯಕತ್ವ ನೀಡಿದ ಸಲುವಾಗಿ ಡಾಕ್ಟರೇಟ್ ನೀಡುವ ಪ್ರಸ್ತಾವನೆ ಮಾಡಿತ್ತು.
ಆದರೆ ಇಂತಹ ಪದವಿಗಳನ್ನು ಸ್ವೀಕರಿಸದಿರಲು ನಿರ್ಧರಿಸಿರುವ ಮೋದಿ ವಿಶ್ವವಿದ್ಯಾಲಯದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.
2014ರಲ್ಲಿ ಅಮೆರಿಕಾದ ಲೂಸಿಯಾನ ವಿಶ್ವವಿದ್ಯಾಲಯ ನೀಡಲು ಬಂದ ಡಾಕ್ಟರೇಟ್ನ್ನೂ ಮೋದಿ ತಿರಸ್ಕರಿಸಿದ್ದರು. ಮುಖ್ಯಮಂತ್ರಿಯಾಗಿದ್ದಾಗಲೂ ಹಲವಾರು ವಿಶ್ವವಿದ್ಯಾಲಯಗಳ ಪದವಿಯನ್ನು ಅವರು ವಿನಮ್ರವಾಗಿ ನಿರಾಕರಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.