ನವದೆಹಲಿ: ಐಐಟಿ ಸೇರಿದಂತೆ ಪ್ರಮುಖ ಎಂಜಿನಿಯರಿಂಗ್ ಮತ್ತು ಸೈನ್ಟಿಫಿಕ್ ಇನ್ಸ್ಟಿಟ್ಯೂಟ್ಗಳು ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಪ್ರಾಚೀನ ಸಾಹಿತ್ಯಗಳನ್ನು ಕಲಿಯಲು ಅನುಕೂಲವಾಗುವಂತೆ ಸಂಸ್ಕೃತ ಇಲಾಖೆಗಳನ್ನು ಸ್ಥಾಪಿಸಬೇಕು ಎಂದು ಶಿಕ್ಷಣ ಸಚಿವಾಲಯ ರಚಿಸಿದ ಸಮಿತಿ ಶಿಫಾರಸ್ಸು ಮಾಡಿದೆ.
ಅಲ್ಲದೇ ವಿದ್ಯಾರ್ಥಿಗಳು ತಮ್ಮ ಕೋರ್ಸ್ನ ಸಂದರ್ಭದಲ್ಲೇ ಸಂಸ್ಕೃತ ಇನ್ಸ್ಟಿಟ್ಯೂಟ್ಗಳಲ್ಲಿ ಇಂಟರ್ನ್ಶಿಪ್ಗಳನ್ನು ಮಾಡುವ ಅವಕಾಶವನ್ನು ನೀಡಬೇಕು ಎಂದಿದೆ.
‘ಅಂತಹ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡಬೇಕು, ಆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಾಚೀನ ಸಂಸ್ಕೃತ ಸಾಹಿತ್ಯದಲ್ಲಿ ಅಡಕವಾಗಿರುವ ವೈಜ್ಞಾನಿಕ ಜ್ಞಾನವನ್ನು ಹೊರತರುವಲ್ಲಿ ಬಳಸಿಕೊಳ್ಳಲಾಗುವುದು’ ಎಂದಿದೆ.
ಸಂಸ್ಕೃತ ಭಾಷೆಯನ್ನು ಬೆಳೆಸಲು 10 ವರ್ಷಗಳ ಮಾರ್ಗದರ್ಶಿಯನ್ನು ಅಳವಡಿಸಿಕೊಳ್ಳಬೇಕು, ಪದವಿಪೂರ್ವ ವಿದ್ಯಾರ್ಥಿಗಳಿಗೆ ಸಂಸ್ಕೃತವನ್ನು ಆಯ್ಕೆಯ ಭಾಷೆಯಾಗಿ ಇಡಬೇಕು ಎಂದು ಸಮಿತಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.