ರೋಟಕ್: ಮೀಸಲಾತಿಯನ್ನು ನೀಡುವಂತೆ ಕೋರಿ ಜಾಟ್ ಸಮುದಾಯದ ಜನರು ಹರಿಯಾಣದಲ್ಲಿ ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದ್ದು ಪರಿಸ್ಥಿತಿ ತೀವ್ರ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ನೂರಾರು ಬಸ್, ರೈಲುಗಳನ್ನು ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಲವಾರು ಅಂಗಡಿ ಮುಂಗಟ್ಟುಗಳನ್ನು, ವಾಹನಗಳನ್ನು ಪ್ರತಿಭಟನಾಕಾರರು ಸುಟ್ಟು ಭಸ್ಮ ಮಾಡಿದ್ದಾರೆ. ಪ್ರಮುಖ ಜಾಟ್ ಸಮುದಾಯದ ಸಚಿವ ಓಪಿ ಧನ್ಕರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಫೆ.22ರವರೆಗೆ ಶಾಲಾ ಕಾಲೇಜುಗಳನ್ನು ಬಂದ್ ಮಾಡುವಂತೆ ಸರ್ಕಾರ ಸೂಚಿಸಿದೆ. ಅಗತ್ಯ ವಸ್ತುಗಳ ಸಾಗಾಟ ಸ್ಥಗಿತಗೊಡ ಹಿನ್ನಲೆಯಲ್ಲಿ ಜನರ ಬದುಕು ದುಸ್ಥಿತಿಗೆ ತಲುಪಿದೆ.
ಸಿಎಂ ಮನೋಹರ್ ಕಟ್ಟರ್ ಸಭೆ ನಡೆಸಿ ಪರಿಸ್ಥಿತಿ ಹತೋಟಿಗೆ ತರುವ ಬಗ್ಗೆ ಚರ್ಚಿಸುತ್ತಿದ್ದಾರೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲೂ ರಕ್ಷಣಾಸಚಿವರ, ಅಧಿಕಾರಿಗಳ ಸಭೆ ನಡೆದಿದೆ.
ಪ್ರತಿಭಟನೆಯ ಮುಂದಾಳತ್ವವನ್ನು ಯಾವೊಬ್ಬ ನಾಯಕನೂ ವಹಿಸಿಕೊಂಡಿಲ್ಲ, ಯುವಕರು ಏಕಾಏಕಿ ರಸ್ತೆಗೆ ನುಗ್ಗಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ಹರಿಯಾಣ ಪೊಲೀಸ್ ಮುಖ್ಯಸ್ಥ ಯಶ್ಪಾಲ್ ಸಿಂಘಾಲ್ ಹೇಳಿದ್ದಾರೆ.
ಕರ್ಫ್ಯೂನ್ನು ಹಾಕಲಾಗಿದೆ, ಯಾರೊಬ್ಬರೂ ಮನೆಬಿಟ್ಟು ಹೊರಬರದಂತೆ ಆದೇಶಿಸಲಾಗಿದೆ. ಸೇನೆಯನ್ನು ಅಲ್ಲಲ್ಲಿ ನಿಲ್ಲಿಸಿ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕಾರ್ಯ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.