ಬಂಟ್ವಾಳ : ಗೋಳ್ತಮಜಲು ಗ್ರಾಮಪಂಚಾಯಿತಿ ಕಚೇರಿಯ ಮತಗಟ್ಟೆ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ನಿದ್ರೆಗೆ ಶರಣಾಗುವ ಮೂಲಕ ಕರ್ತವ್ಯಲೋಪ ಎಸಗಿದ ಘಟನೆ ಬೆಳಕಿಗೆ ಬಂದಿದೆ.
ಮತಗಟ್ಟೆ ಅಧಿಕಾರಿ ಮಹಬಲೇಶ್ವರ ಭಟ್ ಬೆಳಗ್ಗಿನಿಂದಲೇ ಮತದಾರರೊಂದಿಗೆ ಒರಟಾಗಿ ವರ್ತಿಸುತ್ತಿದ್ದ ಬಗ್ಗೆ ದೂರುಗಳು ಕೇಳಿಬಂದಿದ್ದವು.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿರಂತರವಾಗಿ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿದ್ದರೂ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಮಹಾಬಲೇಶ್ವರ ಭಟ್ ನಿದ್ರೆಗೆ ಜಾರಿರುವುದು ಇದೇ ವೇಳೆ ಮತಗಟ್ಟೆಗೆ ಆಗಮಿಸಿದ್ದ ಹಲವು ಮತದಾರರಲ್ಲಿ ಆಕ್ರೋಶ ಮೂಡಿಸಿದೆ.
ಮತದಾರರೇ ಮೊಬೈಲ್ ಮೂಲಕ ಈ ದೃಶ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.