ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವು ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಕೊಲ್ಲೂರು ಮುಕಾಂಬಿಕಾ ದೇವಾಲಯದಲ್ಲಿ ಅಲ್ಲಿನ ಸಿಬ್ಬಂದಿಯೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ಸೇವಾ ಕೌಂಟರ್ ನಲ್ಲಿದ್ದ ಶಿವರಾಮ್ ಅವರು ದೇವರಿಗೆ ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣ ಕದ್ದು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆಡಳಿತಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಆಡಳಿತಾಧಿಕಾರಿಯ ಬೇಜವಾಬ್ದಾರಿಯಿಂದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಚಿನ್ನಾಭರಣವನ್ನು ಖಜಾನೆಯಲ್ಲಿಡದೇ, ಸೇವಾಕೌಂಟರ್ ನಲ್ಲಿ ಇಟ್ಟಿದ್ದರಿಂದ ಈ ಕೃತ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಕೊಲ್ಲುರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಮುಕಾಂಬಿಕೆ ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ಈ ಕುರಿತು ದೂರು ನೀಡಿದ್ದಾರೆ. ಅಲ್ಲದೇ ದೇವಸ್ಥಾನದ ಇ.ಒ ಉಮಾ ಅವರು ಕೊಲ್ಲೂರು ಠಾಣೆಯಲ್ಲಿ ಸಿಬ್ಬಂದಿ ಶಿವರಾಮ್ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ಕಳೆದ ಒಂದು ವಾರದಿಂದ ಸಿಬ್ಬಂದಿ ಶಿವರಾಮ್ ದೇವಸ್ಥಾನದ ಚಿನ್ನಾಭರಣವಿದ್ದ ಬೀರುವಿನ ಕೀಲಿಕೈ ಜತೆ ಪರಾರಿಯಾಗಿದ್ದಾನೆ. ಕಳವಾಗಿರುವುದು ಸುಮಾರು ನಾಲ್ಕು ಲಕ್ಷ ಮೌಲ್ಯದ ಚಿನ್ನದ ಸರ ಎಂಬುದು ತಿಳಿದು ಬಂದಿದೆ.
ಗಂಡನ ತಪ್ಪು ಅರಿತು ಮರಳಿ ದೇವಸ್ಥಾನಕ್ಕೆ ಹಿಂದಿರುಗಿಸಿದ ಸಿಬ್ಬಂದಿ ಶಿವರಾಮ್ ಪತ್ನಿ : ಶಿವರಾಮ್ ಅವರ ಪತ್ನಿ ಮನೆಯಲ್ಲಿದ್ದ ಚಿನ್ನದ ಸರವನ್ನು ದೇವಸ್ಥಾನಕ್ಕೆ ಒಪ್ಪಿಸಿದ್ದಾರೆ. ಚಿನ್ನದ ಸರ ವಾಪಾಸಾಗಿರುವ ಹಿನ್ನೆಲೆಯಲ್ಲಿ ಇಒ ಕೇಸನ್ನು ವಾಪಾಸ್ ಪಡೆಯುವ ಸಾಧ್ಯತೆ ಇದೆ. ಶಿವರಾಮ್ ತಲೆಮರಿಸಿಕೊಂಡಿದ್ದಾನೆ. ಜಿಲ್ಲಾ ಪೊಲೀಸರ ತಂಡ ಈ ಕುರಿತು ತನಿಖೆ ಮುoದುವರಿದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.