ಢಾಕಾ: ಬಾಂಗ್ಲಾದೇಶದ ದೇಗುಲವೊಂದರಲ್ಲೇ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಭಾನುವಾರ ಚುಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.
ಢಾಕಾದಿಂದ 308 ಕಿ.ಮೀ. ದೂರದಲ್ಲಿರುವ ಪಂಚಘರ್ನ ದೇವಿಗನಿ ದೇಗುಲದಲ್ಲಿ 55 ವರ್ಷದ ಅರ್ಚಕ ಜೋಗೇಶ್ವರ್ ರಾಯ್ ಎಂಬುವವರನ್ನು ಕೊಂದು ಹಾಕಲಾಗಿದೆ. ಇವರು ದೇಗುಲದಲ್ಲಿ ಪೂಜೆ, ಪ್ರಾರ್ಥನೆಗಳನ್ನು ಆಯೋಜನೆ ಮಾಡುತ್ತಿದ್ದರು.
5 ರಿಂದ 6 ಮಂದಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಅವರ ಕುತ್ತಿಗೆಯನ್ನು ಸೀಳು ಹಾಕಿದ್ದಾರೆ. ಅವರ ರಕ್ಷಣೆಗೆ ಧಾವಿಸಿ ಭಕ್ತರೊಬ್ಬರನ್ನೂ ಶೂಟ್ ಮಾಡಿ ಗಾಯಗೊಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಯನ್ನು ಪ್ರಕಟಿಸಿರುವ ಇಸಿಸ್ ಘಟನೆಯ ಹೊಣೆಯನ್ನು ಹೊತ್ತು ಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.