ವಾರಣಾಸಿ: ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್ಯು)ದಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರು ಚುನಾವಣೆ ಬೇಡಿಕೆ ಘೋಷಣೆ ಹಾಕಿದ್ದಕ್ಕಾಗಿ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣ ಮುಗಿಸುತ್ತಿದ್ದಂತೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ನಾಯಕ ಅಶುತೋಷ್ ಸಿಂಗ್ ವಿದ್ಯಾರ್ಥಿ ಒಕ್ಕೂಟದ ಚುನಾವಣೆ ನಡೆಸುವಂತೆ ಬೇಡಿಕೆ ಇಟ್ಟಿದ್ದು, ಆತ ಘೋಷಣೆ ಹಾಕುತ್ತಿದ್ದಂತೆ ಸಾರ್ವಜನಿಕರು ಆತನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದು, ನಂತರ ಪೊಲೀಸರು ಅಶುತೋಷ್ನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಬನಾರಸ್ ವಿಶ್ವವಿದ್ಯಾಲಯದ ಘಟಿಕೋತ್ಸವ ಮತ್ತು 15ನೇ ಶತಮಾನದ ದಲಿತ ಕವಿ ರವಿದಾಸ್ರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.