ನವದೆಹಲಿ: ದೇಶದ್ರೋಹದ ಆರೋಪ ಹೊತ್ತಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್ ಖಲೀದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಅವರು ಮಂಗಳವಾರ ತಡರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ.
ಫೆ. 12 ರಂದು ಅಫ್ಜಲ್ ಕಾರ್ಯಕ್ರಮ ಏರ್ಪಡಿಸಿದ ಬಳಿಕ ಈ ಇಬ್ಬರು ಕೆಲ ದಿನಗಳ ಕಾಲ ತಲೆಮರೆಸಿಕೊಂಡಿದ್ದರು. ಕಳೆದ ಭಾನುವಾರ ರಾತ್ರಿ ಜೆಎನ್ಯು ಕ್ಯಾಂಪಸ್ಗೆ ಆಗಮಿಸಿದ್ದರು. ಫೆ.20 ರಂದು ಪೊಲೀಸರು ಇವರು ಮತ್ತು ಉಳಿದ 3 ಮಂದಿಯ ವಿರುದ್ಧ ಲುಕ್ ನೋಟಿಸ್ ಜಾರಿಗೊಳಿಸಿದ್ದರು.
ಇದೀಗ ಇವರಿಬ್ಬರು ಪೊಲೀಸರಿಗೆ ಶರಣಾಗಿದ್ದು, ಸೌತ್ ಕ್ಯಾಂಪಸ್ ಪೊಲೀಸ್ ಸ್ಟೇಷನ್ನಲ್ಲಿ ಕಸ್ಟಡಿಯಲ್ಲಿ ಇಡಲಾಗಿದೆ. ಪೊಲೀಸ್ ಸ್ಟೇಷನ್ನಲ್ಲಿಯೇ ಇವರ ವೈದ್ಯಕೀಯ ಪರೀಕ್ಷೆ ನಡೆದಿದ್ದು, 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.
ಇವರು ಪೊಲೀಸರಿಗೆ ಶರಣಾಗುವ ವೇಳೆ ವಿದ್ಯಾರ್ಥಿಗಳು ಮಾನವ ಸರಪಳಿಯನ್ನು ರಚಿಸಿ ಮಾಧ್ಯಮಗಳು ಎಂಟ್ರಿ ಕೊಡದಂತೆ ನೋಡಿಕೊಂಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.