ನವದೆಹಲಿ: ದೇಶದಾತ್ಯಂತ ಸುಮಾರು 1,000 ರೈಲ್ವೆ ನಿಲ್ದಾಣಗಳನ್ನು ’ಆದರ್ಶ್’ ನಿಲ್ದಾಣಗಳ ಅಡಿಯಲ್ಲಿ ಕುಡಿಯುವ ನೀರು, ಶೌಚಾಲಯ, ಕ್ಯಾಟರಿಂಗ್, ಆರಾಮ ಕೋಣೆಗಳಂತಹ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಹೇಳಿದಾರೆ.
’ಆದರ್ಶ್’ ನಿಲ್ದಾಣಗಳ ಯೋಜನೆ ಅಡಿಯಲ್ಲಿ 2009-10ರಲ್ಲಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾರ್ಯ ಆರಂಭಿಸಲಾಗಿತ್ತು. ಆದರ್ಶ್ ಯೋಜನೆ ಅಡಿಯಲ್ಲಿ 1,052 ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದ್ದು, 2014-15 ವರೆಗೆ 946 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಭು ಹೇಳಿದ್ದಾರೆ.
ಈ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿರುವ ನಿಲ್ದಾಣಗಲ್ಲಿ ಲಭ್ಯವಿರುವ ಪ್ರಯಾಣಿಕರ ಅಗತ್ಯತೆಗಳ ಮತ್ತು ನಿರೀಕ್ಷೆಗಳ ಬಗ್ಗೆ ವಿಮರ್ಶೆ ಮಾಡಲಾಗುತ್ತಿದ್ದು, ಇದೊಂದು ನಿರಂತರ ಪ್ರಕ್ರಿಯೆಯಾಗಿದೆ ಎಂದು ಅವರು ಹೇಳಿದ್ದಾರೆ.
ಈ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಪ್ರಗತಿಯನ್ನು ವಲಯ ಮಟ್ಟ ಮತ್ತು ರೈಲ್ವೆ ಮಂಡಳಿಯ ಮೂಲಕ ಮೇಲ್ವಿಚಾರಣೆ ಮಾಡಲಾಗುವುದು. ’ಪ್ಯಾಸೆಣಜರ್ ಎಮ್ನಿಟೀಸ್’ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನಿಧಿ ಸಂಗ್ರಹಿಸಲಾಗುತ್ತಿದೆ ಎಂದು ಈ ವೇಳೆ ಪ್ರಭು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.