ನವದೆಹಲಿ: ರೋಹಿತ್ ವೆಮುಲಾನ ಸಹೋದರನಿಗೆ ಉದ್ಯೋಗ ನೀಡಲು ದೆಹಲಿ ಸರ್ಕಾರ ನಿರ್ಧರಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ರೋಹಿತ್ ವೆಮುಲಾ ತಾಯಿ ರಾಧಿಕಾ ವೆಮುಲಾ ಭೇಟಿ ಮಾಡಿದ್ದು, ಕುಟುಂಬ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ತಿಳಿಸಿದ್ದರು.
ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನಿವಾಸದಲ್ಲಿ ರಾಧಿಕಾ ವೆಮುಲಾ ಹಾಗೂ ಅವರ ಕಿರಿಯ ಮಗ ರಾಜಾ ವೆಮುಲಾ ಮಾತುಕತೆ ನಡೆಸಿದ್ದು, ರಾಜಾ ವೆಮುಲಾ ಭೂವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ರೋಹಿತ್ ವೆಮುಲಾ ಕುಟುಂಬ ಮೂಲ ಆದಾಯ ಹೊಂದಿರದ ಕಾರಣ ರಾಧಿಕಾ ಅವರು, ರೋಹಿತ್ ಸಹೋದರನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಕೇಜ್ರಿವಾಲ್ ಅವರಲ್ಲಿ ಮನವಿ ಮಾಡಿದ್ದಾರೆ. ರಾಧಿಕಾ ಅವರ ಬೇಡಿಕೆಯನ್ನು ಪರಿಗಣಿಸಿ ರಾಜಾ ವೆಮುಲಾಗೆ ಉದ್ಯೋಗ ನೀಡಲು ಕೇಜ್ರಿವಾಲ್ ಭರವಸೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.