ಬೆಳ್ತಂಗಡಿ : ಬಿದಿರಿನ ಗಂಟೆಯನ್ನು ಹರಕೆರೂಪದಲ್ಲಿ ಸ್ವೀಕರಿಸುತ್ತಿರುವ ಶಿಬಾಜೆ ಗ್ರಾಮದ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಫೆ. 23 ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ ನಡೆಯುತ್ತಿದೆ.
ಬ್ರಹ್ಮಕಲಶೋತ್ಸವದ ನಾಲ್ಕನೆಯ ದಿನವಾದ ಇಂದು (ಫೆ.26) ದೇಗುಲದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಲಲಿತಾ ಸಹಸ್ರನಾಮ ಪಠಣ ನಡೆಯಲಿದೆ.ಇದೇ ವೇಳೆ ವೈದಿಕ ಕಾರ್ಯಕ್ರಮದ ಅಂಗವಾಗಿ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ವನದುರ್ಗಾ ಹೋಮ, ಸೃಷ್ಟಿತತ್ತ್ವ ಹೋಮ, ತತ್ತ್ವಕಲಶ ಪೂಜೆ, ತತ್ವ್ತಕಲಶಾಭಿಷೇಕ, ಅನುಜ್ಞಾಕಲಶಾಭಿಷೇಕ, ಮಧ್ಯಾಹ್ನಗಂಟೆ 12-30 ಕ್ಕೆ ಮಹಾಪೂಜೆ, ಪ್ರಸಾದವಿತರಣೆ, ಅನ್ನಸಂತರ್ಪಣೆ, ಸಂಜೆ ಗಂಟೆ 6 ರಿಂದ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆರೆಖ್ಯ, ಅಮ್ಮಾಜೆ, ಉದನೆ, ಪುತ್ಯೆ, ಕೊಣಾಜೆ, ಸಿರಿಬಾಗಿಲು, ಗುಂಡ್ಯಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಪೂರ್ವಾಹ್ನ ಗಂಟೆ 10 ಗಂಟೆಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ, ಬಳಿಕ ಧರ್ಮಸ್ಥಳ ಮುಳಿಕ್ಕಾರ ಶ್ರೀ ಚಾಮುಂಡೇಶ್ವರೀ ಭಜನಾ ಮಂಡಳಿ ಬಳಿಕ ನೆರಿಯಗಂಡಿಬಾಗಿಲು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯವರಿಂದ ಭಜನಾಕಾರ್ಯಕ್ರಮ ನೆರವೇರಲಿದೆ.
ಸಂಜೆ ೬-೩೦ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಮೂಡಬಿದರೆ ಆಳ್ವಾಸ್ ಪ್ರತಿಷ್ಠಾನ ಅಧ್ಯಕ್ಷ ಡಾ| ಮೋಹನ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ| ಪ್ರಭಾಕರ ಭಟ್ಕಲ್ಲಡ್ಕ ಧಾರ್ಮಿಕ ಪ್ರವಚನ ನೀಡಲಿದ್ದಾರೆ.
ಮಧ್ಯಾಹ್ನ 2-30 ಗಂಟೆಯಿಂದ ಸತ್ಯನಾರಾಯಣ ಪುಣ್ಚಿತ್ತಾಯ, ಜನಾರ್ದನ ತೋಳ್ಪಡಿತ್ತಾಯ, ಶ್ರೀಶರಾವ್ ನಿಡ್ಲೆ ಇವರ ಹಿಮ್ಮೆಳದಲ್ಲಿ ಬಲಿದಾನ ಎಂಬ ಪ್ರಸಂಗದಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಇದರಲ್ಲಿ ಅರ್ಥದಾರಿಗಳಾಗಿ ವಿದ್ವಾನ್ ಉಮಾಕಾಂತ್ ಭಟ್ ಮೇಲುಕೋಟೆ, ಸುಣ್ಣಂಬಳ ವಿಶ್ವೇಶ್ವರ ಭಟ್, ಉಜಿರೆ ಅಶೋಕ್ ಭಟ್ ಭಾಗವಹಿಸಲಿದ್ದಾರೆ. ರಾತ್ರಿಗಂಟೆ 8-30 ರಿಂದ ರಾಮಕೃಷ್ಣ ಕಾಟುಕುಕ್ಕೆ ಇವರಿಂದ ಭಕ್ತಿ ಸಂಗೀತ ಪ್ರಸ್ತುತಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.