ನವದೆಹಲಿ: ಭಾರತದ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡಿರುವ ಅಮೆರಿಕ ರಾಯಭಾರಿ ರಿಚರ್ಡ್ ವರ್ಮಾ ಅವರಿಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಿರುಗೇಟು ನೀಡಿದ್ದಾರೆ.
ಲೋಕಸಭೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪ ಮಾಡಿದ ಅವರು, ಅಮೆರಿಕಾ ತನ್ನ ನೆಲದಲ್ಲಿ ಒಸಾಮ ಬಿನ್ ಲಾದೆನ್ನ ಹುತಾತ್ಮ ದಿನಾಚರಣೆಗೆ ಅವಕಾಶ ನೀಡುವುದೇ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ ಮತ್ತು ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ವರ್ಮಾ, ಜೆಎನ್ಯು ಘಟನೆಗೆ ಸಂಬಂಧಿಸಿದಂತೆ ಮಾತನಾಡುವ ಹಕ್ಕು ಭಾರತ ಮತ್ತು ಅಮೆರಿಕಾದ ಹಾಲ್ ಮಾರ್ಕ್ ಎಂದಿದ್ದರು.
ಇದಕ್ಕೆ ಉತ್ತರಿಸಿರುವ ನಾಯ್ಡು, ನಮ್ಮ ವಿಶ್ವವಿದ್ಯಾಲಯಗಳಲ್ಲಿ ಅಂತಹ ಚಟುವಟಿಕೆಗಳನ್ನು ನಾವು ಸಹಿಸೋದಿಲ್ಲ, ವಿದೇಶಿ ಸಿದ್ಧಾಂತಗಳಿಂದ ಪ್ರೇರಿತಗೊಂಡ ವಿಧ್ವಂಸಕ ಶಕ್ತಿಗಳಿಂದ ನಮ್ಮ ಯುವಜನತೆ ದಾರಿ ತಪ್ಪುವುದಕ್ಕೆ ಅನುವು ಮಾಡಿಕೊಡಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.