ಮಂಗಳೂರು : ಜಯಕಿರಣ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಆಸೀಫ್ ಸರಳೀಕಟ್ಟೆ ಅವರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವುದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಖಂಡಿಸಿದೆ.
ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ಮತ್ತು ಅವರ ಕರ್ತವ್ಯಕ್ಕೆ ಧಕ್ಕೆ ತರುವಂತಹ ಕೆಲಸಗಳು ನಡೆಯುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯದ ಮೇಲೆ ದಾಳಿ ನಡೆಸಲಾಗುತ್ತಿದೆ. ಇದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸುತ್ತದೆ.
ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಮಾಧ್ಯಮದವರು ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡುವಂತೆ ಪೊಲೀಸ್ ವರಿಷ್ಠಾಧಿಕಾರಿಯವರಲ್ಲಿ ಒತ್ತಾಯಿಸಲಾಗುವುದು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸೀಫ್ ಸರಳೀಕಟ್ಟೆ ಕರ್ತವ್ಯ ಮುಗಿಸಿ ಮನೆ ಕಡೆಗೆ ಆಕ್ಟಿವಾ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಆರೋಪಿಗಳು ಅವರ ಸ್ಕೂಟರನ್ನು ತಡೆದು ಮಾರಾಣಾಂತಿಕವಾಗಿ ಹಲ್ಲೆಗೈದು ಕೊಲೆ ಬೆದರಿಕೆ ಒಡ್ಡಿದ್ದಾರೆ. ಆರೋಪಿಗಳನ್ನು ಪೊಲೀಸರು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಪತ್ರಕರ್ತರ ಸಂಘವು ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.