ನವದೆಹಲಿ: ದೇಶದ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿರುವ ಬಜೆಟ್ ಸೋಮವಾರ ಸದನದಲ್ಲಿ ಮಂಡನೆಗೊಳ್ಳಲಿದೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡನೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ಕೃಷಿ, ಆರೋಗ್ಯ, ಸಾಮಾಜಿಕ ವಲಯಗಳಲ್ಲಿನ ಖರ್ಚುವೆಚ್ಚಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ.
ಪದೇ ಪದೇ ಬರ ಸಂಭವಿಸಿ ಸಂಕಷ್ಟಕ್ಕೀಡಾಗಿರುವ ಭಾರತದ ಗ್ರಾಮೀಣ ಭಾಗಗಳಿಗೆ ಬಜೆಟ್ನಲ್ಲಿ ನ್ಯಾಯ ಒದಗಿಸಬೇಕಾದ ಅಗತ್ಯವಿದೆ, ಸಾಲಬಾಧೆಯಿಂದ ಆತ್ಮಹತ್ಯೆ ಹಾದಿ ತುಳಿಯುತ್ತಿರುವ ರೈತರನ್ನೂ ಗಮನದಲ್ಲಿಟ್ಟುಕೊಳ್ಳಬೇಕಾಗಿದೆ.
ಭಾರತದ ಗ್ರಾಮೀಣ ಜನತೆಗೆ ಬಜೆಟ್ ಪೂರಕವಾಗಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.