News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಹುಲ್, ಕೇಜ್ರಿವಾಲ್, ಯೆಚೂರಿ ವಿರುದ್ಧ ದೇಶದ್ರೋಹದ ಪ್ರಕರಣ

rahul-kejri

ನವದೆಹಲಿ: ಜೆಎನ್‌ಯುನ ದೇಶದ್ರೋಹಿ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿಗೆ ಸಂಕಷ್ಟ ಶುರುವಾಗಿದೆ.

ಜೆಎನ್‌ಯು ಘಟನೆಗೆ ಸಂಬಂಧಿಸಿದಂತೆ ಈ ಮೂವರು ಮತ್ತು ಉಳಿದ ಆರು ಮಂದಿಯ  ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಲಾಗಿದೆ.

ಕಾಂಗ್ರೆಸ್ ನಾಯಕರಾದ ಆನಂದ್ ಶರ್ಮಾ ಅಜಯ್ ಮಕೇನ್, ಸಿಪಿಐನ ಡಿ.ರಾಜ, ಜೆಡಿಯುನ ಕೆಸಿ ತ್ಯಾಗಿ, ಜೆಎನ್‌ಯುನ ಕನ್ಹಯ್ಯ ಕುಮಾರ್, ಉಮರ್ ಖಲೀದ್ ಅವರ ವಿರುದ್ಧ  ಎಫ್‌ಐಆರ್ ದಾಖಲಿಸಲಾಗಿದೆ.

ವಕೀಲ ಜನಾರ್ದನ ಗೌಡ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಾ.4 ಕ್ಕೆ ಈ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top