ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ಬುಧವಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.
ದಾಖಲೆಗಳನ್ನು ಬಹಿರಂಗಪಡಿಸ ಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ಈ ಸಮಿತಿ ತೆಗದುಕೊಳ್ಳಲಿದೆ. ಸಂಪುಟ ಕಾರ್ಯದರ್ಶಿ ಅಜಿತ್ ಸೇತ್ ಅವರಿಗೆ ಈ ಸಮಿತಿಯ ನೇತೃತ್ವವನ್ನು ನೀಡಲಾಗಿದೆ. ಅಧೀಕೃತ ರಹಸ್ಯ ಕಾಯ್ದೆ ಅಡಿ ನೇತಾಜೀ ದಾಖಲೆಗಳ ಬಹಿರಂಗದ ಬಗ್ಗೆ ಇದು ಪರಿಶೀಲನೆ ನಡೆಸಲಿದೆ.
ಗೃಹಸಚಿವಾಲ ಮತ್ತು ವಿದೇಶಿ ವ್ಯವಹಾರಗಳ ಮಂತ್ರಿಗಳು, ಗುಪ್ತಚರ ಇಲಾಖೆ ‘ರಾ’ದ ಅಧಿಕಾರಿಗಳು ಈ ಸಮಿತಿಯಲ್ಲಿ ಇರಲಿದ್ದಾರೆ. ಗುರುವಾರ ಈ ಸಮಿತಿಯ ಮೊದಲ ಸಭೆ ನಡೆಯಲಿದೆ.
ಪ್ರಧಾನಿ ಮೋದಿ ಜರ್ಮನಿಯಲ್ಲಿ ನೇತಾಜೀ ಸೋದರ ಮೊಮ್ಮಗ ಸೂರ್ಯ ಬೋಸ್ ಅವರನ್ನು ಭೇಟಿಯಾದ ಬಳಿಕ ಈ ಬೆಳವಣಿಗೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.