ನವದೆಹಲಿ: ದೇಶದ್ರೋಹದ ಕಾನೂನನ್ನು ಕೇಂದ್ರ ಮರು ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.
ನಿನ್ನೆಯಷ್ಟೇ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸ್ರಿಗೆ ನಿಮಗೆ ದೇಶದ್ರೋಹದ ಕಾನೂನಿನ ಅರ್ಥ ಗೊತ್ತಿದೆಯೇ ಎಂದು ಪ್ರಶ್ನಿಸಿತ್ತು. ಇದಾದ ತರುವಾಯ ಈ ಕಾನೂನನ್ನು ಪರಿಶೀಲನೆಗೊಳಪಡಿಸಲು ಕೇಂದ್ರ ಮುಂದಾಗಿದೆ.
ಈ ಕಾನೂನಿಗೆ ತಿದ್ದುಪಡಿಯನ್ನು ತರುವ ಸಲುವಾಗಿ ಸಮಿತಿಯು ಪರಾಮರ್ಶೆ ನಡೆಸುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಜೆಎನ್ಯುನ ವಿದ್ಯಾರ್ಥಿಗಳ ಬಂಧನದ ಸಂಬಂಧ ಈ ತಿದ್ದುಪಡಿಯನ್ನು ಮಾಡಲಾಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ,
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.