ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಬುಧವಾರ ತಡರಾತ್ರಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಸೇನಾ ಪಡೆ ಹತ್ಯೆ ಮಾಡಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ನ ಒಂದು ಮನೆಯಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇಲೆ ಸೇನಾ ಪಡೆ ಬುಧವಾರ ಸಂಜೆಯಿಂದಲೇ ಕಾರ್ಯಾಚರಣೆ ಪ್ರಾರಂಭಿಸಿತ್ತು.
ತಡರಾತ್ರಿಯ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ 3 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇವರನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೊಹಮ್ಮದ್ ಇಸಾಕ್ ಪಾರ್ರಿ, ಆಸೀಫ್ ಅಹ್ಮದ್ ಮೀರ್ ಹಾಗೂ ಆಶಿಕ್ ಹುಸೇನ್ ಭಟ್ ಎಂದು ಗುರುತಿಸಲಾಗಿದೆ.
ಆಶಿಕ್ ಹುಸೇನ್ ಭಟ್ ಉಧಮ್ಪುರ್ ಬಿಎಸ್ಎಫ್ ಕ್ಯಾಂಪ್ ಮೇಲೆ ದಾಳಿ ಮಾಡಿದ ಉಗ್ರರಿಗೆ ಆಶ್ರಯ ನೀಡಿದ್ದವನು ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.