ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳಾಗಿದ್ದ 7 ಜನರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಕೇಂದ್ರದ ಅಭಿಪ್ರಾಯವನ್ನು ಪಡೆಯಲಿದೆ ಎನ್ನಲಾಗಿದೆ.
7 ಅಪರಾಧಿಗಳು ಕಳೆದ 24 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಇವರೆಲ್ಲರೂ ಬಿಡುಗಡೆಗೆ ಕೋರಿ ಅರ್ಜಿಯನ್ನು ಬರೆದಿರುವ ವಿಷಯವನ್ನು ತಮಿಳುನಾಡು ಮುಖ್ಯಕಾರ್ಯದರ್ಶಿ ಕೆ. ಜ್ಞಾನದೇಶಿಕನ್ ಅವರು ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹರ್ಷಿ ಅವರಿಗೆ ಪತ್ರದ ಬರೆದು ತಿಳಿಸಿದ್ದಾರೆ.
ಈ ಹಿಂದೆ ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಲಾಗಿತ್ತು. ಈಗಾಗಲೇ ಇವರುಗಳು 24 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ವಿ. ಶ್ರೀಹರನ್ ಅಲಿಯಾನ್ ಮುರುಗನ್, ಟಿ. ಸುತೇಂದ್ರರಾಜ ಅಲಿಯಾನ್ ಸಂತನ್, ಎ.ಜಿ. ಪೆರಾರಿವಳನ್ ಅಲಿಯಾಸ್ ಅರಿವು, ಜಯಕುಮಾರ್, ರಾಬರ್ಟ್ ಪಾಯಸ್, ರವಿಚಂದ್ರನ್ ಮತ್ತು ನಳಿನಿ ಇವರುಗಳು ಈ 7 ಅಪರಾಧಿಗಳಾಗಿದ್ದಾರೆ.
ಸುಪ್ರೀಂ ಕೋರ್ಟ್ ರಾಜೀವ್ ಗಾಂಧಿಯವರ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದ ನಂತರ ತಮಿಳುನಾಡು ಸರ್ಕಾರ ಈ ಅಪರಾಧಿಗಳನ್ನು ಬಿಡುಗಡೆ ಮಾಡುವುದಾಗಿ 2014 ರ ಫೆ. 19 ರಂದು ಘೋಷಿಸಿತ್ತು. ಆದರೆ ಇದನ್ನು ಆಕ್ಷೇಪಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಮತ್ತೆ ತಮಿಳುನಾಡು ಸರ್ಕಾರ ಈ 7 ಅಪರಾಧಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಕೇಂದ್ರದ ಅಭಿಪ್ರಾಯ ಪಡೆಯಲು ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.