ಬೆಂಗಳೂರು: ಶಾಶ್ವತ ನೀರಾವರಿಗಾಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಲಾಠಿ ಚಾರ್ಜ್ ನಡೆಸಿಲ್ಲ ವೆಂದು ಸರಕಾರ ಹೇಳಿದೆ.
ವಿಧಾಣ ಸಭೆಯಲ್ಲಿ ಫಟನೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್ ರೈತರ ಮೇಲೆ ಲಾಠಿ ಚಾರ್ಜ್ ನಡೆಸಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರು ಬ್ಯಾರಿಕೇಡ್ ಗಳನ್ನು ದಾಟಿಮುನ್ನುಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಪೊಲೀಸರು ಮನವಿಮಾಡಿದ್ದು ಅಲ್ಲಿ ನೂಕುನುಗ್ಗಲು ಉಂಟಾಯಿತು.
ಪ್ರತಿಭಟನೆ ಮುಂದುವರೆಸಿದ್ದರಿಂದ ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವುದನ್ನು ತಡೆಯುವಲ್ಲಿ ಅಲ್ಲಿಯ ಪರಿಸ್ಥಿಯನ್ನು ಹತೋಟಿಗೆ ತರುವಲ್ಲಿ ಕನಿಷ್ಟ ಬಲಪ್ರಯೋಗ ನಡೆಸಲಾಗಿದೆ. ಅಲ್ಲದೇ ಈ ಸಂದರ್ಭ ವಶಕ್ಕೆ ಪಡೆದ ನಾಯಕರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ರೈತರ ವಿರುದ್ಧ ದೌರ್ಜನ್ಯ ಎಸಗಿದ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.