ಭುಜ್: ಇಲ್ಲಿಯ ಕಚ್ ಕರಾವಳಿಯ ಕೋಟೇಶ್ವರ ಕೊಲ್ಲಿ ಪ್ರದೇಶದಲ್ಲಿ ಭಾರತದ ಗಡಿ ಭದ್ರತಾ ಪಡೆಗಳು ಪಾಕಿಸ್ಥಾನ ಮೀನುಗಾರಿಕಾ ದೋಣಿಯನ್ನು ವಶಪಡಿಸಿಕೊಂಡಿದೆ.
ಭದ್ರತಾ ಪಡೆ ಸಿಬ್ಬಂದಿಗಳನ್ನು ಕಂಡ ಕೂಡಲೇ ದೋಣಿಯಲ್ಲಿ ಆಗಮಿಸಿದ್ದ ವ್ಯಕ್ತಗಳು ಕಚ್ನ ಇಂಡೋ-ಪಾಕ್ ಗಡಿ ಮೂಲಕ ಪಾಕಿಸ್ಥಾನದತ್ತ ಪಲಾಯಗೊಂಡಿದ್ದಾರೆ ಎಂದು ಗಡಿ ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ದೋಣಿಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. ಕಳೆದ ಐದು ತಿಂಗಳಿನಲ್ಲಿ ಈ ಪ್ರದೇಶದಲ್ಲಿ ವಶಪಡಿಸಲಾದ ಪಾಕ್ನ ಐದನೇ ದೋಣಿ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.