ಬೆಂಗಳೂರು: ಅಫಘಾತಕ್ಕೊಳಗಾದವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರಕಾರ ಯೋಜನೆಯನ್ನು ಜಾರಿಮಾಡಲು ನಿರ್ಧರಿಸಿದ್ದು, ಇದಕ್ಕೆ ಹರೀಶ್ ಹೆಸರನ್ನಿಡಲು ವಿನಂತಿಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಈ ಯೋಜನೆಯಂತೆ ಅಫಘಾತಕ್ಕೊಳಗಾದ ವ್ಯಕ್ತಿಗೆ 48 ಗಂಟೆ ಅವಧಿಗೆ ಗರಿಷ್ಠ ರೂ. 25 ಸಾವಿರ ವರೆಗಿನ ಚಿಕಿತ್ಸೆಯನ್ನು ನೀಡಲು ಮಾನವೀಯ ನೆಲೆಯಲ್ಲಿ ಒದಗಿಸುವ ಮುಖ್ಯಮಂತ್ರಿ ಸಾಂತ್ವನ ಯೋಜನೆ ಜಾರಿಗೆ ತರಲು ಚಿಂತಿಸಿದೆ. ಈ ಯೋಜನೆಗೆ ರೂ. 72 ಕೋಟಿ ನೀಡಲು ಸಂಚಿವ ಸಂಪುಟ ಒಪ್ಪಿಗೆ ನೀಡಿದ್ದು, ಪ್ರಸ್ತುತ ಯೋಜನೆಗೆ ರೂ. 10 ಕೋಟಿ ಬಿಡುಗಡೆಯಾಗಿದೆ. ಈ ಹಿಂದೆ ಇದನ್ನು ಮುಖ್ಯಮಂತ್ರಿ ಸಾಂತ್ವನ ಯೋಜನೆ ಎಂದು ಹೆಸರಿಡಲು ನಿರ್ಧರಿಸಿದ್ದು ಹರೀಶ್ ಅವರ ಪ್ರಕರಣದ ಬಳಿಕ ಅವರ ಹೆಸರನ್ನಿಡಲು ಚಿಂತನೆ ನಡೆಸಿದೆ.
ಹರೀಶ್ ಬೆಂಗಳೂರಿನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪುವ ಸಂದರ್ಭದಲ್ಲೂ ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿ ಮಾದರಿಯಾಗಿದ್ದಾನೆ. ಆದುದರಿಂದ ಹರೀಶ್ ಹೆಸರಿಡಲು ನಿರ್ಧರಿಸಲಾಗುತ್ತಿರುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಶನಿವಾರ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.