News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕ್ ಕೋರ್ಟ್ ಬಳಿ ಬಾಂಬ್ ದಾಳಿ: 8 ಮಂದಿಯ ದುರ್ಮರಣ

Shabqadar2
ಪೇಶಾವರ: ಇಲ್ಲಿನ ಮಹಮಂದ್ ಪ್ರದೇಶದ ಕೋರ್ಟ್ ಆವರಣದಲ್ಲಿ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಗೆ 8 ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಸಾವನ್ನಪ್ಪಿರುವವರ  8 ಮಂದಿಯ ಪೈಕಿ 3 ಮಂದಿ ಪೊಲೀಸರೂ ಸೇರಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸೊಹೆಲ್ ಖಲೀದ್ ತಿಳಿಸಿದ್ದಾರೆ.

ದಾಳಿ ನಡೆಸಿದ ವ್ಯಕ್ತಿಯು ಶಬ್ಕದರ್ ಪಟ್ಟಣದ ನ್ಯಾಯಾಲಯದ ಕಟ್ಟಡವನ್ನು ಗುರಿಯಾಗಿಸಿದ್ದು, ಕೋರ್ಟ್‌ನ ಕಟ್ಟಡವನ್ನು ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ್ನು ತಡೆದಾಗ ಆತ ತನ್ನನ್ನು ಸ್ವತಃ ಬಾಂಬ್‌ನಿಂದ ಉಡಾಯಿಸಿರುವುದಾಗಿ ಪೊಲೀಸ್ ಅಧಿಕಾರಿ ಸಯೀದ್ ವಜೀರ್ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top