ನವದೆಹಲಿ: ಇಶ್ರತ್ ಜಹಾನ್ ಪ್ರಕರಣವನ್ನು ನಿಭಾಯಿಸಿದ ರೀತಿಗೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ರಾಜಕೀಯ ವಿರೋಧಿಗಳನ್ನು ಫಿಕ್ಸ್ ಮಾಡುವುದು ಕಾಂಗ್ರೆಸ್ ಗುರಿಯಾಗಿತ್ತು ಎಂದಿದ್ದಾರೆ.
ರಾಜಕೀಯ ವಿರೋಧಿಗಳನ್ನು ಫಿಕ್ಸ್ ಮಾಡುವುದಕ್ಕಾಗಿ ರಾಷ್ಟ್ರೀಯ ಭದ್ರತೆಯೊಂದಿಗೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಗುಜರಾತಿನಲ್ಲಿ ಫೇಕ್ ಎನ್ಕೌಂಟರ್ ನಡೆದಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, ಪ್ರಕರಣ ಅಫಿಡವಿಟ್ ಬದಲಾಯಿಸದಷ್ಟು ಸುಲಭವಾಗಿಲ್ಲ. 90 ದಿನಗಳ ಕಾಲ ಪ್ರಕರಣದಲ್ಲಿ ಭಾಗಿಯಾದವರ ಬಗ್ಗೆ ಚಾರ್ಜ್ಶೀಟ್ನ್ನೇ ಸಲ್ಲಿಸಿರಲಿಲ್ಲ ಎಂದಿದ್ದಾರೆ.
ಈ ಎಲ್ಲವನ್ನೂ ಕಾಂಗ್ರೆಸ್ ರಾಜಕೀಯ ನಾಯಕರನ್ನು ಫಿಕ್ಸ್ ಮಾಡುವುದಕ್ಕಾಗಿ ಮಾಡಿತ್ತು, ಇದೀಗ ಅವರ ಕಾರ್ಯ ಎಕ್ಸ್ಫೋಸ್ ಆಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.