ನವದೆಹಲಿ: ಮೂರು ದಿನಗಳ ಕಾಲ ನಡೆಯಲಿರುವ ವಿವಾದಿತ ’ಆರ್ಟ್ ಆಫ್ ಲಿವಿಂಗ್’ ಕಾರ್ಯಕ್ರಮ ಆಯೋಜಿಸುವ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಬುಧವಾರ ತೀರ್ಪು ನೀಡಲಿದೆ.
ಇದೇ ವೇಳೆ ಯಮುನಾ ನದಿ ತೀರದ ಪ್ರವಾಹ ಪ್ರದೇಶವನ್ನು ಹಾನಿಗೊಳಿಸಲಾಗಿದೆ ಎಂದು ಹಲವು ತಜ್ಞರು ಆರೋಪಿಸಿದ್ದು, ಇದಕ್ಕಾಗಿ ಶ್ರೀ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ 100 ಕೋಟಿ ರೂ. ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆರ್ಟ್ ಆಫ್ ಲಿವಿಂಗ್ನ ವಿಶ್ವ ಸಾಂಸ್ಕೃತಿಕ ಕಾರ್ಯಕ್ರಮ ಮೂರು ದಿನ ನಡೆಯಲಿದ್ದು, ಯೋಗ, ಧ್ಯಾನ, ಶಾಂತಿ ಪ್ರಾರ್ಥನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಈ ಕಾರ್ಯಕ್ರಮಕ್ಕಾಗಿ ಯಮುನಾ ನದಿ ತೀರದ 1000 ಎಕರೆ ಗುಡ್ಡ ಪ್ರದೇಶವನ್ನು ಪರಿವರ್ತಿಸಲಾಗಿದ್ದು, ಇದರ ಪರಿಶೀಲನೆಗಾಗಿ ಹಸಿರು ನ್ಯಾಯಪೀಠದ ಅಡಿಯಲ್ಲಿ ಪ್ರೊ. ಸಿ.ಆರ್. ಬಾಬು ಪರಿಶೀಲನೆ ನಡೆಸಿದ್ದಾರೆ. ಇಲ್ಲಿನ ಪ್ರವಾಹ ಪ್ರದೇಶವನ್ನು ಸಮತಟ್ಟುಗೊಳಿಸಲಾಗಿದ್ದು, ಈ ಪ್ರದೇಶಕ್ಕೆ ವ್ಯಾಪಕ ಹಾನಿ ಉಂಟಾಗಿದೆ. ಇದಕ್ಕಾಗಿ ಆರ್ಟ್ ಆಫ್ ಲಿವಿಂಗ್ 100-120 ಕೋಟಿ ರೂ. ದಂಡ ಪಾವತಿಸಬೇಕು ಎಂದು ಸಿ.ಆರ್. ಬಾಬು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.