ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಕ್ಷದ ಇತರ ಐವರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸುಮಿತ್ ದಾಸ್ ಅವರು ಪ್ರಕರಣದ ವಿಚಾರಣೆ ನಡೆಸಿದ್ದು, ಈ ಸಂದರ್ಭ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ದೀಪಕ್ ಭಾಜಪೇಯಿ, ರಾಘವ್ ಚಡ್ಡಾ, ಸಂಜಯ್ ಸಿಂಗ್ ಹಾಗೂ ಅಶುತೋಷ್ ಅವರು ಎಪ್ರಿಲ್ 7ರಂದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.
ಕೋರ್ಟ್ ಇವರನ್ನು ಐಪಿಸಿ ಸೆಕ್ಷನ್ 500 (ಕ್ರಿಮಿನಲ್ ಮಾನನಷ್ಟ್ರ) ಹಾಗೂ ಸೆಕ್ಷನ್ 34 (ಉದ್ದೇಶ) ಅಡಿಯಲ್ಲಿ ಸಮನ್ಸ್ ಜಾರಿಗೊಳಿಸಿದೆ.
ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಹಗರಣದಲ್ಲಿ ತಮ್ಮ ಪಾತ್ರವಿದೆ. ತಾನು ಹಾಗೂ ತನ್ನ ಕುಟುಂಬ M/s 21st Century Media Pvt Ltd ಸಂಸ್ಥೆಯಿಂದ ಲಾಭ ಪಡೆಯುತ್ತಿದೆ ಎಂಬ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಹೇಳಿ ಜೇಟ್ಲಿ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.