ಕೋಲ್ಕತ್ತಾ: ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಲು ಬಿಜೆಪಿ ಮುಂದಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಅವರ ಎದುರಾಳಿಯಾಗಿ ತನ್ನ ಕಡೆಯಿಂದ ಚಂದ್ರ ಕುಮಾರ್ ಬೋಸ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಚಂದ್ರ ಕುಮಾರ್ ಬೋಸ್ ಅವರು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಸಹೋದರ ಮೊಮ್ಮಗನಾಗಿದ್ದು, ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರನ್ನು ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಸುವುದಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ಘೋಷಣೆ ಮಾಡಿದ್ದಾರೆ.
’ಪಶ್ಚಿಮಬಂಗಾಳದಲ್ಲಿ ಬದಲಾವಣೆಯಾಗಬೇಕಾದ ಸಂದರ್ಭ ಬಂದಿದೆ. ಈ ಬದಲಾವಣೆಯನ್ನು ಬಿಜೆಪಿಯೇ ತರಲಿದೆ’ ಎಂದು ಸ್ಮೃತಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲು ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈಗಾಗಲೇ ಪಕ್ಷಗಳು ಕಣಕ್ಕಿಳಿಯುವ ಸಮರ್ಥ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. ತೃಣಮೂಲ ಕಾಂಗ್ರೆಸ್, ಸಿಪಿಎಂ ನಡುವೆ ನೇರ ಹಣಾಹಣಿ ಏರ್ಪಡಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕೂಡ ಅಸ್ತಿತ್ವಕ್ಕಾಗಿ ಸೆಣಸಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.