ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಲಾಲ ಸಿರಿ ಗ್ರಾಮೋದ್ಯೋಗ ಸಂಸ್ಥೆ ಇದರ ಸಹಯೋಗದಲ್ಲಿ ಲಾಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಮಂಗಳವಾರ ಮಹಿಳಾ ದಿನಾಚರಣೆಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ನ್ಯಾಯಾಲಯದ ಜೆಎಂಎಫ್ಸಿ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ನ್ಯಾಯಾಲಯದ ಜೆಎಂಎಫ್ಸಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ಅರುಣ ಕುಮಾರಿ ಎ., ಸಹಾಯಕ ಸರ್ಕಾರಿ ಅಭಿಯೋಜಕ ಕಿರಣ್ ಕುಮಾರ್ ಜೆ.ಕೆ. ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.
ವಕೀಲರ ಸಂಘದ ಅಧ್ಯಕ್ಷ ಸುಬ್ರಮಣ್ಯ ಕುಮಾರ್ ಅಗರ್ತ, ಉಪಾಧ್ಯಕ್ಷ ವಸಂತ ಜಿ ಮರಕಡ, ಕಾರ್ಯದರ್ಶಿ ಶಿವಯ್ಯ ಎಸ್.ಎಲ್, ವಕೀಲರಾದ ಎನ್.ಡಿ. ರತ್ನವರ್ಮ ಬುಣ್ಣು, ಸ್ವರ್ಣಲತಾ ಎ, ಧನಂಜಯ ಕುಮಾರ್ ಬಿ.ಕೆ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ದೈನಂದಿನ ಜೀವನದಲ್ಲಿ ಕಾನೂನು ಹಾಗೂ ಮಹಿಳಾ ಪರ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು.
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನಿರ್ದೇಶಕಿ ಮನೋರಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರೂಪಾ ಜಿ. ಜೈನ್ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.