ನವದೆಹಲಿ: ಎ.19ರಂದು ಆಯೋಜಿಸಲಾಗಿರುವ ರೈತ ಸಮಾವೇಶಕ್ಕೆ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ಶುಕ್ರವಾರ ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಹತ್ವದ ಸಭೆಯನ್ನು ನಡೆಸುತ್ತಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ಜನಾಲೋಂದನ ರೂಪಿಸುವುದು, ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಯೋಜನೆಯೊಂದಿಗೆ ಈ ಬೃಹತ್ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಎರಡು ತಿಂಗಳ ಅಜ್ಞಾತ ವಾಸದಿಂದ ನಿನ್ನೆ ಆಗಮಿಸಿರುವ ರಾಹುಲ್ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಹಿರಿಯ ಕಾಂಗ್ರೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ. ದೇಶದಾದ್ಯಂತದಿಂದ ಆಗಮಿಸುವ ರೈತ ನಿಯೋಗವನ್ನು ಅವರು ಖುದ್ದು ಭೇಟಿಯಾಗಿಲಿದ್ದಾರೆ ಎನ್ನಲಾಗಿದೆ.
ರೈತ ಸಮಾವೇಶದ ನೇತೃತ್ವವನ್ನೂ ರಾಹುಲ್ ಗಾಂಧಿಯವರೇ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಆನಂದ್ ಶರ್ಮ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.