ನವದೆಹಲಿ: ಸಂಸತ್ತಿನಲ್ಲಿ ಆಡಳಿತ ಪಕ್ಷವನ್ನು ಮುಜುಗರಕ್ಕೆ ದೂಡಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಇದೀಗ ಸ್ವತಃ ತಾನೇ ಮುಜುಗರಕ್ಕೊಳಪಡುವ ಸ್ಥಿತಿ ನಿರ್ಮಾಣವಾಗಿದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಒಂದು ಬಾರಿ ತನ್ನನ್ನು ತಾನು ಬ್ರಿಟಿಷ್ ಪ್ರಜೆ ಎಂದು ಘೋಷಿಸಿದ್ದರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡುವಂತೆ ಲೋಕಸಭಾದ ನೈತಿಕ ಸಮಿತಿ ರಾಹುಲ್ ಅವರಿಗೆ ನೋಟಿಸ್ ನೀಡಿದೆ.
ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅವರು ದಾಖಲು ಮಾಡಿದ ಪ್ರಕರಣದ ಆಧಾರದಲ್ಲಿ ರಾಹುಲ್ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಇದೊಂದು ಗಂಭೀರ ವಿಚಾರವಾಗಿದ್ದು, ರಾಹುಲ್ ಅವರ ಪ್ರತಿಕ್ರಿಯೆಯ ಬಳಿಕ ಈ ಬಗ್ಗೆ ಸಮಿತಿ ಚರ್ಚೆ ನಡೆಸಲಿದೆ ಎಂದು ಸಂಸತ್ತಿನ ನೈತಿಕ ಸಮಿತಿಯ ಅರ್ಜುನ್ ರಾಮ್ ಮೆಘಾವಲ್ ತಿಳಿಸಿದ್ದಾರೆ.
ಲೋಕಸಭಾ ಸ್ಪೀಕರ್ಗೆ ದೂರು ತಲಪಿದ್ದು, ಅದನ್ನು ಅವರು ಎಥಿಕಲ್ ಕಮಿಟಿಗೆ ವರ್ಗಾಯಿಸಿದ್ದಾರೆ. ಹೀಗಾಗಿ ರಾಹುಲ್ ಅವರಿಗೆ ಶೋಕಾಸು ನೋಟಿಸ್ ನೀಡಲಾಗಿದೆ.
ಲಂಡನ್ ಕಂಪನಿಯೊಂದರಲ್ಲಿ ಡೈರೆಕ್ಟರ್ ಆಗುವ ವೇಳೆ ತಾನು ಲಂಡನ್ ಪ್ರಜೆ ಎಂಬುದನ್ನು ರಾಹುಲ್ ಹೇಗೆ ತೋರಿಸಿದರು ಎಂಬುದಕ್ಕೆ ಉತ್ತರಿಸುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.