ಭುವನೇಶ್ವರ: ದೇಶೀಯವಾಗಿ ನಿರ್ಮಿಸಲಾಗಿರುವ ಭಾರತದ ಅಗ್ನಿ-I ಪರಮಾಣು ಕ್ಷಿಪಣಿಯ ಯಶಸ್ವಿ ಪರೀಕ್ಷೆ ಇಂದು ಒಡಿಶಾದ ಕರಾವಳಿಯಲ್ಲಿ ನಡೆಸಲಾಗಿದೆ.
700 ಕಿ.ಮೀ. ದೂರವನ್ನು ಕ್ರಮಿಸುವ ಸಾಮರ್ಥ್ಯ ಹೊಂದಿದ ಈ ಕ್ಷಿಪಣಿಯನ್ನು ಸೋಮವಾರ ಬೆಳಗ್ಗಿನ ಜಾವ 9.11ಕ್ಕೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಐಲ್ಯಾಂಡ್ (ವ್ಹೀಲರ್ ಐಲ್ಯಾಂಡ್)ನಲ್ಲಿ ಯಶಸ್ವಿ ಪರೀಕ್ಷೆ ನಡೆಸಲಾಗಿದೆ. ಸ್ಟ್ರೆಟಿಜಿಕ್ ಫೋರ್ಸಸ್ ಕಮಾಂಡ್ (ಎಸ್ಎಫ್ಸಿ)ನ ತರಬೇತಿಯ ಭಾಗವಾಗಿ ಈ ಪರೀಕ್ಷೆ ನಡೆಸಲಾಗಿದ್ದು, ಯಶಸ್ವಿಯಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಅಧಿಕಾರಿ ತಿಳಿಸಿದ್ದಾರೆ.
ಡಿಆರ್ಡಿಒ ಅಭಿವೃದ್ಧಿಪಡಿಸಿದ ಈ ಕ್ಷಿಪಣಿ ಮಧ್ಯಮ ಶ್ರೇಯಾಂಕ ಕ್ಷಿಪಣಿಯಾಗಿದ್ದು, ಆಧುನಿಕ ಸಂಚರಣಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದು ೧,೦೦೦ ಕೆ.ಜಿ ಪೇಲೋಡ್ ಒಯ್ಯುವ ಸಾಮರ್ಥ್ಯ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.