ಮೈಸೂರು : ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳು ಮೈಸೂರಿನಲ್ಲಿ ಕೊಲೆ ಮಾಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿ ಮೈಸೂರು ಬಂದ್ಗೆ ಕರೆ ನೀಡಿದ್ದಾರೆ.
ಆರೋಪಿಗಳನ್ನು ಬಂಧಿಸುವವರೆಗೂ ಹೋರಾಟ ನಡೆಸುತ್ತೇವೆ ಎಂದಿರುವ ಬಿಜೆಪಿಯು ಸರಕಾರದ ಮುಂದೆ ಮೂರು ಷರತ್ತುಗಳನ್ನು ಇಟ್ಟಿದ್ದು, ಸರಕಾರ 25 ಲಕ್ಷರೂ. ಪರಿಹಾರ ನೀಡುವಂತೆ ಕೇಳಲಾಗಿದೆ. ಅಲ್ಲದೇ ಮೃತ ರಾಜು ಮನೆಮುಂದೆ ನಿರ್ಮಿಸಲಾಗುತ್ತಿರುವ ವಿವಾದಿತ ಮದರಸಾವನ್ನು ಕಟ್ಟಡ ಕಾಮಗಾರಿ ನಿಲ್ಲಸುವಂತೆ ಷರತ್ತುಗಳನ್ನು ಇಡಲಾಗಿದೆ. ಕೆ. ಆರ್. ಆಸ್ಪತ್ರೆಯ ಶವಾಗಾರದ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಕೆಲವೆಡೆ ವಾಹನಗಳ ಮೇಲೆ ಕಲ್ಲು ತೂರಾಟ, ಒಂದು ಆಟೋಗೆ ಬೆಂಕಿ ಹಚ್ಚಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಈ ಫಟನೆಯ ಬಗ್ಗೆ ಪ್ರತಿಕಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಆರೋಪಿಗಳನ್ನು ಶೀಫ್ರವೇ ಬಂಧಿಸಲಾಗುವುದು. ಅಲ್ಲದೇ ಈ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.