ಬೆಳ್ತಂಗಡಿ : ಲಾಯಿಲ ಗ್ರಾ.ಪಂ. ಎದುರು ಇಂದು ನಡೆದ ಪ್ರತಿಭಟನೆ ದುರುದ್ದೇಶ ಪೂರ್ವಕ ನಡೆದಿದ್ದು, ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡಲಾಗಿದೆ. ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಗ್ರಾ.ಪಂ. ಸಿದ್ದವಾಗಿದೆ ಎಂದು ಗ್ರಾ.ಪಂ ಅಧ್ಯಕ್ಷ ವೀಣಾರಾವ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.
ಲಾಯಿಲ ಪಂಚಾಯತು ರಾಜ್ಯದಲ್ಲಿಯೇ ಗುರುತಿಸುವಂತಹ ಸಾಧನೆ ಮಾಡಿದ್ದು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಬಂದ ಅನುದಾನಗಳ ಸಮರ್ಪಕ ಬಳಕೆ ಮಾಡಲಾಗಿದೆ. ಪ್ರತಿಭಟನಾಕಾರರು ಮಾಡಿರುವ ಹೆಚ್ಚಿನ ಆರೋಪಗಳು ವಾಸ್ತವಕ್ಕೆ ದೂರವಾಗಿವೆ. ಕುಡಿಯುವ ನೀರಿನ ಸಮಸ್ಯೆ ಒಂದಿಷ್ಟು ಇದ್ದರೂ ಅದನ್ನು ಪರಿಹರಿಸಲಾಗಿದೆ. ಇನ್ನುಳಿದ ಪ್ರದೇಶಗಳಿಗೂ ನೀರೊದಗಿಸುವ ವ್ಯವಸ್ಥೆ ಮಾಡಲಾಗುವುದು. ಬಂದ ಅನುದಾನಗಳನ್ನು ಉಪಯೋಗಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಶಾಸಕರ, ಜಿ.ಪಂ. ಸದಸ್ಯರ ಮೇಲೆ ಒತ್ತಡ ಹಾಕಿ ಇನ್ನಷ್ಟು ಅನುದಾನ ತರುವ ಪ್ರಯತ್ನ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಗೋಷ್ಠಿಯಲ್ಲಿ ತಾ.ಪಂ. ಸದಸ್ಯ ಸುಧಾಕರ ಬಿ.ಎಲ್., ಗ್ರಾ.ಪಂ. ಸದಸ್ಯರಾದ ದಿನೇಶ್ ಶೆಟ್ಟಿ, ಮೋಹನದಾಸ, ರುಕ್ಮಯ್ಯ ಕನ್ನಾಜೆ, ಮಾಜಿ ಸದಸ್ಯ ವಸಂತ ರಾಣೆ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.