ಬೆಂಗಳೂರು : ಸಿಎಂ ಸಿದ್ದರಾಮಯ್ಯನವರ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ನಟರಾಜ್ ಎಸ್.ಶರ್ಮಾ ಸಲ್ಲಿಸಿದ್ದ ಪಿಐಎಲ್ ಹೈಕೋರ್ಟ್ ವಜಾಗೊಳಿಸಿದಲ್ಲದೇ, ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆ ನಡೆಸುವಂತೆ ಆದೇಶಿಸಿದೆ.
ಸಿಎಂ ಸಿಎಂ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ನಟರಾಜ್ ಎಸ್.ಶರ್ಮಾ ಅವರು ದೆಹಲಿ, ಚೆನೈ ಮತ್ತು ಬೆಂಗಳೂರಿನ ಜಾರಿ ನಿರ್ದೇಶನಾಲಯದ ಕಚೇರಿಗಳಿಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಆದರೆ ಜಾರಿ ನಿರ್ದೇಶನಾಲಯ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿರಲಿಲ್ಲ. ಈ ಸಂಬಂಧ ಅವರು ಹೈಕೋರ್ಟ್ನಲ್ಲಿ ಪಿಐಎಲ್ ದಾಖಲಿಸಿದ್ದರು.
ವಕೀಲ ನಟರಾಜ್ ಎಸ್.ಶರ್ಮಾ ಪಿಐಎಲ್ ವಿಚಾರಣೆ ಸಂದರ್ಭ ಅರ್ಜಿದಾರರ ಪರ ವಕೀಲರು, ಸಿಎಂ ದುಬಾರಿ ವಾಚನ್ನು ಉಡುಗೊರೆಯಾಗಿ ಪಡೆದಿದ್ದು, ಈ ಪ್ರಕರಣದಲ್ಲಿ ವಿದೇಶಿ ನಿಯಮಗಳು ಪಾಲನೆಯಾಗಿವೆಯೇ? ಅಥವಾ ಇಲ್ಲವೇ? ಎಂದು ವಾದ ಮಂಡಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹೈಕೋರ್ಟ್ ಈ ಸಂಬಂಧ ಕೋರ್ಟ್ ಏನುಮಾಡಲು ಸಾಧ್ಯ ಈ ರಾಜ್ಯ ಸರಕಾರ ಕ್ರಮಕೈಗೊಳ್ಳ ಬೇಕಾಗಿದ್ದು, ಮುಖ್ಯಮಂತ್ರಿಗಳ ವಿರುದ್ಧ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವಂತೆ ಹೈಕೋರ್ಟ್ ಹೇಳಿದೆ. ಅಲದೇ ಸೂಕ್ತ ತನಿಖೆ ಕೈಗೊಳ್ಳುವಂತೆ ಜಾರಿ ನಿರ್ದೇಶನಾಲಯಕ್ಕೆ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.