ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಶುಕ್ರವಾರ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಬೆಳಿಗ್ಗೆ 11.30ರಿಂದ ಸಂಜೆ 5ರವರೆಗೆ ಆನಂದ್ ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಶಿ, ಆರ್.ಅಶೋಕ್, ಪಿ.ಸಿ.ಮೋಹನ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರುಗಳು ಭಾಗವಹಿಸಿದ್ದಾರೆ.
ಬಿಬಿಎಂಪಿಯ ಕಾರ್ಮಿಕರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಬಿಬಿಎಂಪಿಯನ್ನು ಮೂರು ಭಾಗ ಮಾಡಬಾರದು ಎಂಬ ಆಗ್ರಹವನ್ನೂ ಪ್ರತಿಭಟನಾಕಾರರು ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಸೋಲುವ ಭೀತಿಯಿಂದ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.