ನವದೆಹಲಿ: ಪ್ರಾದೇಶಿಕ ಸಹಕಾರಗಳ ದಕ್ಷಿಣ ಏಷ್ಯಾ ಸಂಸ್ಥೆ (ಸಾರ್ಕ್)ನ ವಿದೇಶ ಮಂತ್ರಿಗಳ ಎರಡು ದಿನಗಳ ಸಭೆ ನೇಪಾಳದ ಪೊಖಾರಾದಲ್ಲಿ ಇಂದು ಆರಂಭವಾಗಲಿದೆ. ಈ ವೇಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಾಕಿಸ್ಥಾನದ ವಿದೇಶಾಂಗ ಸಚಿವಾಲಯದ ಸಲಹೆಗಾರ ಸರ್ತಾಜ್ ಅಜೀಜ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಾರ್ಕ್ ಪ್ರತಿನಿಧಿಗಳು ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದಲ್ಲಿ ಸಭೆ ನಡೆಸಲಿದ್ದು, ವಿದೇಶಾಂಗ ಸಚಿವರು 2016ರಲ್ಲಿ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಪ್ರಧಾನಿ ಮಟ್ಟದ ಸಭೆಯಲ್ಲಿ ಚರ್ಚಿಸಬಹುದಾದ ವಿಚಾರಗಳ ಕಾರ್ಯಸೂಚಿಯ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಭಾರತದೊಂದಿಗೆ ಯಾವುದೇ ಸಂದರ್ಭದಲ್ಲೂ ಮಾತುಕತೆ ನಡೆಸಲು ಪಾಕಿಸ್ಥಾನ ಸಿದ್ಧವಿದೆ ಮತ್ತು ನೇಪಾಳದಲ್ಲಿ ಅಜೀಜ್ ಹಾಗೂ ಸ್ವರಾಜ್ ನಡುವೆ ಮುಕ್ತವಾಗಿ ಮಾತುಕತೆ ನಡೆಸಲು ಬಯಸಿದೆ ಎಂದು ಪಾಕ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೇಪಾಳದಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಮಾತುಕತೆಯ ಯಾವುದೇ ಪ್ರಸ್ತಾಪವಿಲ್ಲ. ಸಂದರ್ಭ ಬಂದಲ್ಲಿ ಪಾಕಿಸ್ಥಾನ ಧನಾತ್ಮಕವಾಗಿ ಸ್ಪಂದಿಸಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.