ನವದೆಹಲಿ: ಬಿಜೆಪಿ ಬಹುತೇಕ ರಾಷ್ಟ್ರ ವಿರೋಧಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ್ದಾರೆ. ಅದು ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಜೆಎನ್ಯು ವಿದ್ಯಾರ್ಥಿಗಳನ್ನು ರಕ್ಷಿಸುವ ಪ್ರಯತ್ನ ನಡೆಸುತ್ತಿದ ಎಂದು ಅವರು ಟ್ವಿಟರ್ ಮೂಲಕ ಆರೋಪಿಸಿದ್ದಾರೆ.
ಜೆಎನ್ಯು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲದ ಹೊರಗಿನ ಯಾವುದೋ ಗುಂಪು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿರುವುದಾಗಿ ಜೆಎನ್ಯು ತನಿಖಾ ಸಮಿತಿ ಹೇಳಿದೆ. ಇದರ ಬೆನ್ನಲ್ಲೇ ಕೇಜ್ರಿವಾಲ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ರಾಷ್ಟ್ರ ವಿರೋಧಿ ಗೋಷಣೆ ಕೂಗಿದವರು ಕಾಶ್ಮೀರಿಗಳಾಗಿದ್ದು, ನಿಜವಾದ ದ್ರೋಹಿಗಳನ್ನು ಬಂಧಿಸಿ ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಅವರಿಗೆ ನಿರಾಸೆ ಮೂಡಿಸಲು ಬಯಸುತ್ತಿಲ್ಲ. ಅಲ್ಲದೇ ತಾನು ಪ್ರಧಾನಿ ಮೋದಿಗಿಂತಲೂ ದೊಡ್ಡ ದೇಶಭಕ್ತ ಎಂದು ಹೇಳಿದ್ದಾರೆ.
ದೇಶದ್ರೋಹದ ಆರೋಪದ ಮೇಲೆ ಕೇಜ್ರಿವಾಲ್ ವಿರುದ್ಧ ಹೈದರಾಬಾದ್ ಪೊಲೀಸರು ಫೆ.29ರಂದು ಎಫ್ಐಆರ್ ದಾಖಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.