ಚಂಡೀಗಢ: ಮೀಸಲಾತಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಜಾಟ್ ಸಮುದಾಯ ಹರಿಯಾಣ ಸರ್ಕಾರಕ್ಕೆ ನೀಡಿರುವ 72 ಗಂಟೆಗಳ ಡೆಡ್ಲೈನ್ ಗುರುವಾರಕ್ಕೆ ಅಂತ್ಯಗೊಳ್ಳಲಿದೆ.ಈ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ತಮ್ಮ ಬೇಡಿಕೆ ಗುರುವಾರದೊಳಗೆ ಪೂರ್ಣಗೊಳ್ಳದ ಹೋದರೆ ಹೋರಾಟವನ್ನು ಮತ್ತೆ ಆರಂಭಿಸುವುದಾಗಿ ಜಾಟರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಕೇಂದ್ರದಿಂದ ಪ್ಯಾರಾ ಮಿಲಿಟರಿ ಪಡೆಯನ್ನು ಕರೆಸಿಕೊಳ್ಳಲಾಗಿದ್ದು, ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
ಕಳೆದ ತಿಂಗಳು ನಡೆದ ಜಾಟ್ ಪ್ರತಿಭಟನೆಯನ್ನು ಹತ್ತಿಕ್ಕುವಲ್ಲಿ ಹರಿಯಾಣ ಸರ್ಕಾರ ಸಂಪೂರ್ಣ ವಿಫಲಗೊಂಡಿದ್ದು, 30 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಬಾರಿ ಹಾಗಾಗದಂತೆ ಎಚ್ಚರಿಕೆ ವಹಿಸಲು ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.