ಬೆಳ್ತಂಗಡಿ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ವರ್ಣ ಮಹೋತ್ಸವದ ಪ್ರಯುಕ್ತ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ ಯುಜಿಸಿ ಪ್ರಾಯೋಜಿತ ರಾಷ್ಟ್ರೀಯ ಕಮ್ಮಟವು ಮಾರ್ಚ್ 23 ರಂದು ವಿತ್ತೀಯ ಸೇರ್ಪಡೆ ಹಾಗೂ ಸಬಲೀಕರಣದಲ್ಲಿ ವ್ಯವಹಾರ ಪ್ರತಿನಿಧಿಯ ಪಾತ್ರ ಎಂಬ ವಿಷಯದ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಉಜಿರೆಯ ರುಡ್ಸೆಟ್ ಸಂಸ್ಥೆ ಹಾಗೂ ಮಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ಸಂಘದ ಸಹಯೋಗದಲ್ಲಿ ಉಜಿರೆಯಲ್ಲಿ ನಡೆಯಲಿದೆ.
ಈ ಸಮ್ಮೇಳನವನ್ನು ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ದಿ ಸಚಿವಾಲಾಯದ ಪ್ರಾಯೋಜಿತ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕ ಕೆ.ಎನ್.ಜನಾರ್ಧನ್ ಅವರು ಉದ್ಘಾಟಿಸಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್. ಮಂಜುನಾಥ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಅಭಿವೃದ್ದಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಪ್ರಶಾಂತ್.ಹೆಚ್.ಡಿ ಅವರು ಭಾಗವಹಿಸಲಿದ್ದು, ಕಾಲೇಜಿನ ಪ್ರಾಚಾರ್ಯ ಪ್ರೊ.ಕೆ.ಎಸ್.ಮೋಹನನಾರಾಯಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಡಾ.ಎನ್.ಕೆ.ತಿಂಗಳಾಯ ಅವರು ಸಮಾರೋಪ ಭಾಷಣ ಮಾಡಲಿದ್ದು, ಉಜಿರೆ ರುಡ್ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಟಿ.ಪಿ.ಜಗದೀಶ್ ಮೂರ್ತಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸುಮಾರು 150 ಜನ ಅಧ್ಯಾಪಕರು, ಸಂಶೋಧಕರು ಭಾಗವಹಿಸುವ ಈ ಸಮ್ಮೇಳನದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಂಶೋಧನಾತ್ಮಕ ಪ್ರಭಂಧಗಳ ಮಂಡನೆಯಾಗಲಿದೆ ಎಂದು ಸಮ್ಮೇಳನದ ನಿರ್ದೇಶಕರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪಿ.ಕೆ.ಬಾಲಕೃಷ್ಣ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸಂಘದ ಅಧ್ಯಕ್ಷ ಡಾ.ಎ.ಜಯ ಕುಮಾರ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.