ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಶಾಖಪಟ್ಟಣದಲ್ಲಿ ‘AP FiberNet’ ಗೆ ಚಾಲನೆ ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಆಂಧ್ರಪ್ರದೇಶ ಸರ್ಕಾರ ಮನೆಗಳಿಗೆ ಮತ್ತು ಕಚೇರಿಗಳಿಗೆ ಕಡಿಮೆ ದರಗಳಲ್ಲಿ ಬ್ರಾಡ್ಬ್ಯಾಂಡ್ ಸೇವೆ ಒದಗಿಸಲಿದೆ.
ತಿಂಗಳಿಗೆ 149 ರೂ. ದರದಲ್ಲಿ 15 ಎಂಬಿಪಿಎಸ್ ಸ್ಪೀಡ್ ಬ್ರಾಡ್ಬ್ಯಾಂಡ್ ಹಾಗೂ ಕಚೇರಿಗಳಿಗೆ 999 ರೂ. ವೆಚ್ಚದಲ್ಲಿ 100 ಎಂಬಿಪಿಎಸ್ ಸ್ಪೀಡ್ ಬ್ರಾಡ್ಬ್ಯಾಂಡ್ ಒದಗಿಸಲಿದೆ. ಈ ದರಗಳು ಇತರ ಇಂಟರ್ನೆಟ್ ಸೇವೆ ವಿತರಕರ ದರಗಳಿಗಿಂತ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಲಾಗಿದೆ.
ಎಪಿ ಫೈಬರ್ ಗ್ರಿಡ್ ಪ್ರಾಜೆಕ್ಟ್ನ್ನು ಕೇಂದ್ರದ ನ್ಯಾಷನಲ್ ಆಪ್ಟಿಕ್ ಫೈಬರ್ ನೆಟ್ವರ್ಕ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆಯನ್ನು 333 ಕೋಟಿ ರೂ. ವೆಚ್ಚದಲ್ಲಿ ಕಾರ್ಯಗತಗೊಳಿಸಲಾಗುತ್ತಿದ್ದು, ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ನಾಯ್ಡು ಹೇಳಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ಈ ಯೋಜನೆಗಾಗಿ ಸಿಸ್ಕೋ ಜೊತೆ ಕೈಜೋಡಿಸಿದ್ದು, ಆಂಧ್ರದ 1.3 ಕೋಟಿ ಮನೆಗಳಿಗೆ ‘AP FiberNet’ ಒದಗಿಸಲಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.