ನವದೆಹಲಿ: ಬಾಲಿವುಡ್ ಸೂಪರ್ಸ್ಟಾರ್ ಅಮಿತಾಭ್ ಬಚ್ಚನ್ ಅವರು ಮಾ.19 ರಂದು ಕೋಲ್ಕತ್ತಾದ ಈಡೆನ್ ಗಾರ್ಡನ್ನಲ್ಲಿ ನಡೆದ ಭಾರತ-ಪಾಕಿಸ್ಥಾನ ಪಂದ್ಯದಲ್ಲಿ ಭಾವುಕತೆ ಮತ್ತು ಗಾಂಭೀರ್ಯದಿಂದ ರಾಷ್ಟ್ರಗೀತೆಯನ್ನು ಹಾಡಿ ಮೆಚ್ಚುಗೆ ಗಳಿಸಿದ್ದರು.
ಆದರೆ ಅವರು ರಾಷ್ಟ್ರಗೀತೆ ಹಾಡಿದ್ದು ಇದೀಗ ವಿವಾದವಾಗಿ ಪರಿವರ್ತನೆಗೊಳ್ಳುತ್ತಿದೆ.
ರಾಷ್ಟ್ರಗೀತೆ ಹಾಡಲು ಅವರು 4 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎಂಬ ಸುದ್ದಿ ಹರಡಿದ್ದು. ಈ ವಿವಾದಕ್ಕೆ ಕೋಲ್ಕತ್ತಾ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಫುಲ್ ಸ್ಟಾಪ್ ಇಟ್ಟಿದ್ದು, ಅಮಿತಾಭ್ ಅವರು ಒಂದೇ ಒಂದು ಪೈಸೆ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆ ವಿವಾದ ಮುಗಿದ ಬಳಿಕ ಇದೀಗ ಅಮಿತಾಭ್ ಅವರು ತಪ್ಪಾಗಿ ರಾಷ್ಟ್ರಗೀತೆ ಹಾಡಿದ್ದಾರೆ ಎಂದು ಆರೋಪಿಸಿ ದೆಹಲಿಯ ಅಶೋಕ ನಗರ ಪೊಲೀಸ್ ಸ್ಟೇಶನ್ನಿನಲ್ಲಿ ದೂರೊಂದು ದಾಖಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.