ನವದೆಹಲಿ: ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯ ಅನ್ವಯ ಎಲ್ಲಾ ಮಾಜಿ ಸೈನಿಕರು ಹೋಳಿ ಹಬ್ಬದೊಳಗೆ ತಮ್ಮ ಬಾಕಿ ಪಿಂಚಣಿ ಹಣವನ್ನು ಪಡೆದುಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ.
‘ಹೋಳಿಯೊಳಗೆ ಎಲ್ಲರಿಗೂ ಅವರ ಬಾಕಿ ಸಿಗುವಂತೆ ನೋಡಿಕೊಳ್ಳುತ್ತೇವೆ, ಈ ಹೋಳಿ ಮಾಜಿ ಸೈನಿಕರ ಪಾಲಿಗೆ ನಿಜಕ್ಕೂ ಕಲರ್ಫುಲ್ ಆಗಲಿದೆ’ ಎಂದು ಅವರು ಹೇಳಿದ್ದಾರೆ.
ಮಾ.27ರೊಳಗೆ 2,293 ಕೋಟಿ ಹಣವನ್ನು ಹಂಚಿಕೆ ಮಾಡುವ ನಿಟ್ಟಿನಲ್ಲಿ ಬ್ಯಾಂಕುಗಳು ಮತ್ತು ರಕ್ಷಣಾ ಇಲಾಖೆಗಳು ಈ ನಿಟ್ಟಿನಲ್ಲಿ ರಾತ್ರಿ ಹಗಲೆನ್ನದೆ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಪರಿಕ್ಕರ್ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
ಮೊದಲ ಹಂತವಾಗಿ ಮಾ.14ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 1,465 ಕೋಟಿ ರೂಪಾಯಿಯನ್ನು 7.75ಲಕ್ಷ ರಕ್ಷಣಾ ಪಿಂಚಣಿದಾರರಿಗೆ ಹಂಚಿಕೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.