ನವದೆಹಲಿ: ಹೋಳಿ ಹಬ್ಬಕ್ಕೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಬಂಪರ್ ಕೊಡುಗೆಯನ್ನು ನೀಡಿದೆ. ಕೇಂದ್ರ ನೌಕರರ ತುಟ್ಟಿಭತ್ಯೆಯನ್ನು ಬುಧವಾರ ಪ್ರಸ್ತುತ ಇರುವ ಶೇ.119ರಿಂದ ಶೇ.125ಕ್ಕೆ ಏರಿಕೆ ಮಾಡಿದೆ.
ಜನವರಿ.1, 2016ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಏರಿಕೆ ಮಾಡಲಾಗಿದ್ದು, 4.8 ಮಿಲಿಯನ್ ಕೇಂದ್ರ ನೌಕರರು ಮತ್ತು 5.5 ಮಿಲಿಯನ್ ಪಿಂಚಣಿದಾರರು ಇದರ ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ.
ನೌಕರರ ಮೂಲ ವೇತನವನ್ನು ಆಧರಿಸಿ ತುಟ್ಟಿಭತ್ಯೆಯನ್ನು ನಿರ್ಧರಿಸಲಾಗುತ್ತದೆ. ವರ್ಷದಲ್ಲಿ ಎರಡು ಬಾರಿ ಇದನ್ನು ಪರಿಷ್ಕರಣೆ ಮಾಡಲಾಗುತ್ತದೆ.
ಕಳೆದ ವರ್ಷದ ಸೆಪ್ಟಂಬರ್ನಲ್ಲಿ ಶೇ.113ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.119ಕ್ಕೆ ಏರಿಕೆ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.