ಬೆಳ್ತಂಗಡಿ : ಸರ್ಕಾರದ ಕಾನೂನಿಗೆ ವಿರುದ್ಧವಾಗಿ, ಹಿಂದು ಭಾವನೆಗೆ ದಕ್ಕೆ ಉಂಟುಮಾಡುವ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಕದಡುವ ದುರುದ್ದೇಶದಿಂದ ಸರ್ಕಾರದ ಕಾನೂನು ನಿಯಮಗಳನ್ನು ಬದಿಗೊತ್ತಿ, ದ.ಕ. ಜಿಲ್ಲಾಧಿಕಾರಿಯವರ ಹೆಸರಿನಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೂಡಲೇ ಹಿಂಪಡೆಯಬೇಕು, ಕಾನೂನಿಗೆ ವಿರುದ್ದವಾಗಿ ಮುದ್ರಿಸಿ ವಿತರಿಸಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ವಿಶ್ವಹಿಂದು ಪರಿಷತ್, ಬಜರಂಗದಳ ಬೆಳ್ತಂಗಡಿ ತಹಶೀಲ್ದಾರರ ಮೂಲಕ ಹಿಂದೂ ಧಾರ್ಮಿಕ ದತ್ತಿ ಮತ್ತು ಉಂಬಳಿ ಇಲಾಖೆಯ ಆಯುಕ್ತರಿಗೆ ಬುಧವಾರ ಮನವಿ ಸಲ್ಲಿಸಿದರು.
ಆಮಂತ್ರಣ ಪತ್ರಿಕೆಯಲ್ಲಿ ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಸ್ವೇಚ್ಛಾಚಾರವನ್ನು ಪ್ರಕಟಿಸಿರುವುದು ಕಂಡುಬರುತ್ತದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 7 ರ ಅಡಿ ಆಯುಕ್ತ ಹಿಂದೂವಾಗಿರತಕ್ಕದ್ದು. ಹಿಂದೂಯೇತರ ಜಿಲ್ಲಾಧಿಕಾರಿಗಳು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ಉದ್ದೇಶವನ್ನು ನೆರವೇರಿಸಲು ಕಲಂ 7 ರಂತೆ ಹಿಂದೂ ಧರ್ಮವನ್ನು ಅನುಸರಿಸುವ ಅಪರ ಜಿಲ್ಲಾಧಿಕಾರಿಗಳನ್ನು ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ ಎಂದು ಸ್ಪಷ್ಟ ವಿವರಣೆಯನ್ನು ನೀಡಲಾಗಿದೆ.
ಆದರೂ ಹಿಂದೂಗಳ ಭಾವನೆಗೆ ಧಕ್ಕೆಯಾಗುವ ಹಾಗೆ ಮಾಡಿದ್ದು ಸರಿಯಲ್ಲ. ಈಗೀರುವ ಆಮಂತ್ರಣ ಪತ್ರಿಕೆಯನ್ನು ಹಿಂದಕ್ಕೆ ಪಡೆದು, ಕಾನೂನಿನ ನಿರ್ದೇಶನದ ಪ್ರಕಾರ ಹಿಂದೂ ಧರ್ಮದಲ್ಲಿ ಶ್ರದ್ಧೆ, ನಂಬಿಕೆ ಇರುವ ವ್ಯಕ್ತಿಗಳ ಹೆಸರಿನೊಂದಿಗೆ ಮರು ಮುದ್ರಿಸಿ ವಿತರಿಸಬೇಕು. ಕಾನೂನು ಮೀರಿ ವರ್ತಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಆಮಂತ್ರಣ ಪತ್ರಿಕೆಯನ್ನು ಮರು ಮುದ್ರಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮುಂದುವರಿಸಲಿದ್ದೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭ ಬಜರಂಗದಳ ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ, ತಾಲೂಕು ಸಹಸಂಚಾಲಕ ರಮೇಶ್ ಧರ್ಮಸ್ಥಳ, ಧರ್ಮಜಾಗರಣ ವಿಭಾಗ ಪ್ರಮುಖ್ ದಿನಕರ ಅದೇಲು, ವಿಎಚ್ಪಿ ಜಿಲ್ಲಾ ಮುಖಂಡ ತಿಮ್ಮಪ್ಪ ಗೌಡ ಬೆಳಾಲು, ತಾಲೂಕು ಅಧ್ಯಕ್ಷ ತಾರನಾಥ, ಕಾರ್ಯದರ್ಶಿ ನವೀನ್ ನೆರಿಯ ಮೊದಲಾದವರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.