ಹೈದರಾಬಾದ್: ಜೆಎನ್ಯು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಮೇಲೆ ಚಪ್ಪಲಿ ಎಸೆದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ವಿಜಯವಾಡದಲ್ಲಿ ೇರ್ಪಡಿಸಿದ್ದ ಎರಡು ದಿನಗಳ ವಿಚಾರ ಸಂಕಿರಣದಲ್ಲಿ ಕನ್ಹಯ್ಯ ಕುಮಾರ್ ಭಾಗವಹಿಸಿ ಮಾತನಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರ್ಯಕ್ರಮದ ಸಂಘಟಕರು ಕನ್ಹಯ್ಯ ರಕ್ಷಣೆಗೆ ಧಾವಿಸಿದ್ದು, ಸದ್ಯ ಕಾರ್ಯಕ್ರಮ ನಿಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ಹಯ್ಯ ಕುಮಾರ್, ವಿಶ್ವವಿದ್ಯಾಲಯಗಳು, ಬುದ್ಧಿಜೀವಿಗಳು ’ನಿರ್ಣಾಯಕ ಚಿಂತನೆ’ಗಳನ್ನು ಉತ್ತೇಜಿಸುವ ಕಾರ್ಯ ನಿರ್ವಹಿಸಬೇಕು. ಸರ್ಕಾರ ವಿಶ್ವವಿದ್ಯಾಲಯಗಳ ಸ್ವಾಯತ್ತತೆ ನಾಶ ಮಾಡಲು ಪ್ರಯತ್ನಿಸುತ್ತಿದೆ ಎಂದು ಕನ್ಹಯ್ಯ ಹೇಳಿದ್ದಾನೆ.
ಹೈದರಾಬಾದ್ ವಿಶ್ವವಿದ್ಯಾಲಯ (ಎಚ್ಸಿಯು)ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಜೆಎನ್ಯುನ ಮುಂದುವರಿದ ಭಾಗವಾಗಿದೆ. ಜೆಎನ್ಯು, ಎಚ್ಸಿಯು, ಅಲಿಗರ್ಘ ವಿಶ್ವವಿದ್ಯಾಲಯಗಳು ಸಮರ ಸ್ಥಾನಗಳಾಗಿ ಪರಿವರ್ತನೆಗೊಳ್ಳುತ್ತಿವೆ ಎಂದು ಕನ್ಹಯ್ಯ ಹೇಳಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.