ಮೈಸೂರು : ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಯ ಸಿದ್ದರಾಮನ ಹುಂಡಿ ಜಾತ್ರೆಯಲ್ಲಿ ಜನರು ಬಾಯಿಗೆ ಬೀಗಹಾಕುವ ಮೂಲಕ, ದೇವರಿಗೆ ವಿಶಿಷ್ಟ ಹರಕೆಸಲ್ಲಿಸುವ ಪದ್ಧತಿ ರೂಢಿಯಲ್ಲಿದೆ.
ಸಿಎಂ ಸಿದ್ದರಾಮಯ್ಯ ಆಚಾರ-ವಿಚಾರಗಳನ್ನು ಮೂಢನಂಬಿಕೆಗಳೆಂದು ಪರಿಗಣಿಸುವವರು. ಈ ಬಾರಿಯ ಬಜೆಟ್ ಅನ್ನು ರಾಹುಕಾಲದಲ್ಲಿ ಬಜೆಟ್ ಮಂಡಿಸುವ ಮೂಲಕ ಇದೆಲ್ಲಾ ಮೌಢ್ಯವೆಂದು ಹೇಳಿದವರು. ಆದರೆ ಅವರ ತವರು ಜಿಲ್ಲೆಯಲ್ಲೇ ಜಾತ್ರಾ ಸಂದರ್ಭ ಬಾಯಿಗೆ ಬೀಗ ಹಾಕಿ ಹರಕೆಸಲ್ಲಿಸುವ ಪದ್ಧತಿ ಚಾಲ್ತಿಯಲ್ಲಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈ ಪದ್ಧತಿ ಮತ್ತು ಆಚರಣೆಗಳು ಜನರಿಗೆ ಸಂಬಂಧಿಸಿದ್ದಾಗಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಸರಕಾರ ಕೆಂಡಹಾಯುವ ಸಂಪ್ರದಾಯ ಸೇರಿದಂತೆ ಹಲವು ವಿಷಯಗಳಿಗೆ ಮೌಢ್ಯ ಪ್ರತಿಬಂಧಕ ಕಾಯಿದೆ ತರಲು ಚಿಂತಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಮೌಢ್ಯ ಪ್ರತಿಬಂಧಕ ಕಾನೂನನ್ನು ತರಲಾಗುವುದು ಎಂದು ವಿಧಾನಸಭೆಯಲ್ಲಿ ಹೇಳಿದ್ದರು.ಇದಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ತರಾಟೆಗೆ ಒಳಗಾಗಿದ್ದರು. ಈಗ ಸಿಎಂ ಈ ಕಾನೂನು ತರುವ ಬಗ್ಗೆ ಪ್ರಸ್ತಾಪಿಸಿದ್ದು ಅಚ್ಚರಿಯನ್ನು ಮೂಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.