ನವದೆಹಲಿ: ಎರಡು ತಿಂಗಳ ಅಜ್ಞಾತ ವಾಸದಿಂದ ವಾಪಾಸ್ ಬಂದಿರುವ ರಾಹುಲ್ ಗಾಂಧಿಯವರು ಪಕ್ಷದ ನೇತೃತ್ವವನ್ನು ವಹಿಸಲಿದ್ದು, ಪಕ್ಷದಲ್ಲಿ ಸಂಘಟನಾತ್ಮಕ ಬದಲಾವಣೆ ತರಲು ಯೋಜಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ‘ಕಾಂಗ್ರೆಸ್ನ ಸಂಘಟನೆಯಲ್ಲಿ ಸಂಘಟನಾತ್ಮಕ ಬದಲಾವಣೆ ತರಲು ಯೋಜಿಸಿದ್ದೇವೆ, ರಾಹುಲ್ ಬಯಸುವ ಬದಲಾವಣೆಗಳನ್ನು ಮಾಡಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಅವರಿಗೆ ಮಹತ್ತರ ಜವಾಬ್ದಾರಿಯನ್ನು ನೀಡಲು ಪಕ್ಷ ಬಯಸಿದೆ ಎನ್ನಲಾಗಿದೆ. ಎ.19ರಂದು ನಡೆಯಲಿರುವ ಕಾಂಗ್ರೆಸ್ ರೈತ ಸಮಾವೇಶದ ನೇತೃತ್ವವನ್ನೂ ಅವರು ವಹಿಸಿಕೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.