ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತೀವ್ರಗೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳಿಗೆ ಓದಲು ವಿದ್ಯುತ್ ಪೂರೈಕೆಗೆ ನಿರ್ದಿಷ್ಟ ಸಮಯ ರೂಪಿಸಿದೆ.
ವಿದ್ಯಾರ್ಥಿಗಳು ಅಧ್ಯಯನ ನಡೆಸಲು ರಾತ್ರಿ 6 ಗಂಟೆಯಿಂದ 10 ಗಂಟೆ ವರೆಗೆ ಹಾಗೂ ಬೆಳಗ್ಗೆ 6 ಗಂಟೆಯಿಂದ 9 ಗಂಟೆ ವರೆಗೆ ನಿರಂತರವಾಗಿ ವಿದ್ಯುತ್ ಪೂರೈಸುವುದಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ವಿಧಾನಸಭೆಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತು ವಿದ್ಯುತ್ ಕೊರತೆ ಇದ್ದು, ವಿದ್ಯಾರ್ಥಿಗಳ ಅಧ್ಯಯನ ಸಮಯದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡದಂತೆ ಐದು ವಿದ್ಯುತ್ ಸರಬರಾಜು ಕಂಪೆನಿಗಳ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ 2000 ಮೆಗಾವ್ಯಾಟ್ ವಿದ್ಯುತ್ ಕೊರತೆ ಹೊಂದಿದೆ. ೨೦೧೫ರಲ್ಲಿ ಮುಂಗಾರು ಕೊರತೆಯಿಂದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.