ನವದೆಹಲಿ: ಶಂಕಿತ ಭಾರತೀಯ ಗುಪ್ತಚರರೊಬ್ಬರನ್ನು ಬಂಧಿಸಿರುವುದಾಗಿ ಪಾಕಿಸ್ಥಾನದ ಬಲೋಚಿಸ್ತಾನ ಪ್ರಾಂತ್ಯದ ಅಧಿಕಾರಿಗಳು ಹೇಳಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಪಾಕ್ ರಾಯಭಾರ ಕಛೇರಿ ಭಾರತಕ್ಕೆ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿತ್ತು.
ಈ ಬಗ್ಗೆ ಶುಕ್ರವಾರ ಸ್ಪಷ್ಟನೆ ನೀಡಿರುವ ಭಾರತ, ಪಾಕಿಸ್ಥಾನದಲ್ಲಿ ಬಂಧಿಯಾಗಿರುವವರು ಭಾರತದ ಮಾಜಿ ನೌಕಾ ಅಧಿಕಾರಿಯಾಗಿದ್ದು, ನಿವೃತ್ತಿಯಾದ ಅವರಿಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದೆ.
’ಪಾಕ್ ಹೇಳಿರುವ ವ್ಯಕ್ತಿಗೂ ನಮಗೂ ಸಂಬಂಧವಿಲ್ಲ, ಅವರು ಅವಧಿಗೂ ಮುನ್ನವೇ ನೌಕೆಯಿಂದ ನಿವೃತ್ತರಾಗಿದ್ದಾರೆ, ಭಾರತಕ್ಕೆ ಬೇರೆ ದೇಶದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶಿಸುವ ಆಸಕ್ತಿಯಿಲ್ಲ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಸ್ಪೈ ಬಂಧನದ ಹಿನ್ನಲೆಯಲ್ಲಿ ಪಾಕಿಸ್ಥಾನ ಭಾರತಕ್ಕೆ ತನ್ನ ವಿರೋಧವನ್ನು ವ್ಯಕ್ತಪಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.