ನವದೆಹಲಿ: ನೇತಾಜೀ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ಎರಡನೇ ಹಂತದ ದಾಖಲೆಗಳನ್ನು ಮಂಗಳವಾರ ಆನ್ಲೈನ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಮಹೇಶ್ ಶರ್ಮಾ ಅವರು ಸಂಜೆ ಆನ್ಲೈನ್ www.netajipapers.gov.in. ಮೂಲಕ ನೇತಾಜೀ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ.
ಇದರಲ್ಲಿ ಒಟ್ಟು 50 ದಾಖಲೆಗಳಿದ್ದು, 10 ದಾಖಲೆಗಳನ್ನು ಪ್ರಧಾನಿ ಕಾರ್ಯಾಲಯದಿಂದ, 10ನ್ನು ಗೃಹ ಸಚಿವಾಲಯದಿಂದ, 30 ದಾಖಲೆಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಪಡೆದುಕೊಳ್ಳಲಾಗಿದೆ.
ಈ ಎಲ್ಲಾ ದಾಖಲೆಗಳು 1956 ರಿಂದ 2009 ರವರೆಗೆ ಸಂಬಂಧಿಸಿದ್ದು ಎನ್ನಲಾಗಿದೆ. ಜ. 23ರಂದು ನೇತಾಜೀ ಅವರು 119 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೆ ಸಂಬಂಧಪಟ್ಟ 100 ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.